10.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮನ್ಸೂಚನೆ ಇದೆ. ಈಗಿನಂತೆ ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ. 11 ರಿಂದ ಮುಂದಿನ 10 ದಿನಗಳವರೆಗೂ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕೊಡಗು ಜಿಲ್ಲೆ ಹೊರತುಪಡಿಸಿ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜೂನ್ 10ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಕೊಡಗು ಜಿಲ್ಲೆಯಲ್ಲಿ ಜೂನ್ 14ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ. ಅಲ್ಲಿಯ ತನಕ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಯಾದಗಿರಿ, ಕಲಬುರ್ಗಿ ಹಾಗೂ ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರದ, ಕೋಲಾರ, ಚಿಕ್ಕಬಳ್ಳಾಪುರದ ಒಂದೆರಡು ಕಡೆ, ತುಮಕೂರಿನ ಪಾವಗಢ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆಗಳಿವೆ. ಜೂನ್ 10ರಿಂದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇನ್ನೆರಡು ದಿನಗಳಲ್ಲಿ ಆಂದ್ರಾ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಇದರಿಂದ ಮುಂಗಾರು ಚುರುಕಾಗಿ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ.
ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕಾ ಕಂಪನಿ "ಬ್ರಿವೆರಾ"ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ,…
ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ…
ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ …
ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ ಜುಲೈ 22 ರಂದು ಮಾವಿನಹಣ್ಣಿನ…
ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/…
ಈ ಗಿಡದ ಸಸ್ಯ ಶಾಸ್ತ್ರೀಯ ಹೆಸರು Andrographis Paniculata. ಕಿರಾತಕಡ್ಡಿಗೆ ನೆಲಬೇವು ಎಂಬ…