Advertisement
ವೆದರ್ ಮಿರರ್

ಹವಾಮಾನ ವರದಿ | 02-10-2024 | ಅ.6 ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ | ಹಿಂಗಾರು ಆರಂಭವಾಗುವ ಲಕ್ಷಣ ಕಾಣಿಸುತ್ತಿಲ್ಲ |

Share

03.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ಹಾಗೂ ಗುಡುಗಿನ ಸಾಧ್ಯತೆ ಇದ್ದು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡ ಹಾಗೂ ಗುಡುಗಿನೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಅಕ್ಟೊಬರ್ 6 ರಿಂದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ಅಕ್ಟೊಬರ್ 9ರ ನಂತರ ಒಣ ಹವೆ ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಪೂರ್ವ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆದರೆ, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಕ್ಟೊಬರ್ 6ರ ತನಕ ಜೋರು ಮಳೆಯ ಸಾಧ್ಯತೆ ಕಡಿಮೆ ಇರಬಹುದು.

ಒಳನಾಡು : ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಗುಡುಗು ಸಹಿತ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಯಾವುದೇ ಮಹತ್ವದ ಚಟುವಟಿಕೆಗಳು ಕಾಣಿಸುತ್ತಿಲ್ಲ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳಿಂದ ಈಗಿನ ಮಳೆಯ ವಾತಾವರಣವು ಉಂಟಾಗಿದೆ. ಸದ್ಯ ಕ್ಕೆ ಹಿಂಗಾರು ಆರಂಭವಾಗುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

5 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

17 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

17 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

18 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

18 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

18 hours ago