ಹವಾಮಾನ ವರದಿ | 17-10-2025 | ರಾಜ್ಯದ ಎಲ್ಲೆಲ್ಲಾ ಗುಡುಗು ಮಳೆ ? ರಾಜ್ಯದಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆ

October 17, 2025
2:32 PM
ಅರಬ್ಬಿ ಸಮುದ್ರದ ತಿರುವಿಕೆಯು ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿದ್ದು, ಇದರೊಂದಿಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. 

18.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.  ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೊಬರ್ 18 ರಿಂದ ಮತ್ತೆ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಅಕ್ಟೊಬರ್ 19 ರಿಂದ ಅಲ್ಲಲ್ಲಿ ಹಿಂಗಾರು ಮಳೆ ಆರಂಭವಾಗಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಅರಬ್ಬಿ ಸಮುದ್ರದ ತಿರುವಿಕೆಯು ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿದ್ದು, ಇದರೊಂದಿಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ
ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror