18.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೊಬರ್ 18 ರಿಂದ ಮತ್ತೆ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಅಕ್ಟೊಬರ್ 19 ರಿಂದ ಅಲ್ಲಲ್ಲಿ ಹಿಂಗಾರು ಮಳೆ ಆರಂಭವಾಗಿದ್ದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಅರಬ್ಬಿ ಸಮುದ್ರದ ತಿರುವಿಕೆಯು ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿದ್ದು, ಇದರೊಂದಿಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…