28.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಆದರೆ ಮಧ್ಯ ಬಿಡುವಿನ ಅಂತರ ಸ್ವಲ್ಪ ಜಾಸ್ತಿ ಇರಬಹುದು. ಮಳೆಯೊಂದಿಗೆ ಗಾಳಿಯ ವೇಗವೂ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು, ಮಳೆ ಪೂರ್ತಿ ಬಿಟ್ಟು ಸಿಗುವ ಸಾಧ್ಯತೆಗಳಿಲ್ಲ. ಜುಲೈ 1ರಿಂದ ಸ್ವಲ್ಪ ಹೆಚ್ಚಾಗಬಹುದು. ಜುಲೈ 6 ರಿಂದ ಮತ್ತೆ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಬಿಡುವಿನ ಸಮಯ ಸ್ವಲ್ಪ ಹೆಚ್ಚಿರಬಹುದು. ಕೆಲವು ಭಾಗಗಳಲ್ಲಿ ಸ್ವಲ್ಪ ಬಿಸಿಲಿನ ಸಾಧ್ಯತೆಯೂ ಇದೆ. ಈಗಿನಂತೆ ಜೂನ್ 29 ರಿಂದ ಕಡಿಮೆಯಾಗುವ ಲಕ್ಷಣಗಳಿವೆ. ಕರಾವಳಿಯಲ್ಲಿ ಮಳೆಯ ಹೆಚ್ಚಿದಂತೆಯೇ ಮಲೆನಾಡು ಭಾಗಗಳಲ್ಲಿಯೂ ಹೆಚ್ಚಾಗುವ ಸಾಧ್ಯತೆ ಇದೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಜೂನ್ 28 ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜುಲೈ 4ರಿಂದ ಅಲ್ಲಲ್ಲಿ ಮತ್ತೆ ಮಳೆ ಆರಂಭವಾಗುವ ಸೂಚನೆಗಳಿವೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…