28.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಆದರೆ ಮಧ್ಯ ಬಿಡುವಿನ ಅಂತರ ಸ್ವಲ್ಪ ಜಾಸ್ತಿ ಇರಬಹುದು. ಮಳೆಯೊಂದಿಗೆ ಗಾಳಿಯ ವೇಗವೂ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು, ಮಳೆ ಪೂರ್ತಿ ಬಿಟ್ಟು ಸಿಗುವ ಸಾಧ್ಯತೆಗಳಿಲ್ಲ. ಜುಲೈ 1ರಿಂದ ಸ್ವಲ್ಪ ಹೆಚ್ಚಾಗಬಹುದು. ಜುಲೈ 6 ರಿಂದ ಮತ್ತೆ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಬಿಡುವಿನ ಸಮಯ ಸ್ವಲ್ಪ ಹೆಚ್ಚಿರಬಹುದು. ಕೆಲವು ಭಾಗಗಳಲ್ಲಿ ಸ್ವಲ್ಪ ಬಿಸಿಲಿನ ಸಾಧ್ಯತೆಯೂ ಇದೆ. ಈಗಿನಂತೆ ಜೂನ್ 29 ರಿಂದ ಕಡಿಮೆಯಾಗುವ ಲಕ್ಷಣಗಳಿವೆ. ಕರಾವಳಿಯಲ್ಲಿ ಮಳೆಯ ಹೆಚ್ಚಿದಂತೆಯೇ ಮಲೆನಾಡು ಭಾಗಗಳಲ್ಲಿಯೂ ಹೆಚ್ಚಾಗುವ ಸಾಧ್ಯತೆ ಇದೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಜೂನ್ 28 ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜುಲೈ 4ರಿಂದ ಅಲ್ಲಲ್ಲಿ ಮತ್ತೆ ಮಳೆ ಆರಂಭವಾಗುವ ಸೂಚನೆಗಳಿವೆ.
2026ರ ಎಲ್‌ನಿನೋ ಪರಿಣಾಮದಿಂದ ಮುಂಗಾರು ಮತ್ತು ಹಿಂಗಾರು ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಮೇ 2027ರವರೆಗೆ…
ಅಸ್ಸಾಂನ ಬರಾಕ್ ಕಣಿವೆಯ ಕಟಿಗೋರಾ ಭಾಗದಲ್ಲಿ ಸ್ಥಳೀಯ ಅಡಿಕೆ ಸಾಗಣೆಗೆ ಸಿಂಡಿಕೇಟ್ ಅಡ್ಡಿಪಡಿಸುತ್ತಿದೆ…
ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯಲಿದ್ದು, ಉತ್ತರ ಭಾರತದ ಶೀತ ಹಾಗೂ ಶುಷ್ಕ ಗಾಳಿಯಿಂದ ಚಳಿಯ…
ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ವಿದ್ವತ್ ಪರೀಕ್ಷೆಯಲ್ಲಿ…
ಬಳ್ಳಾರಿಯ ಗೃಹಿಣಿ ಆರ್.ಜೆ. ಸುಜಾತ ಅವರು ಮನೆಯ ತಾರಸಿಯಲ್ಲಿ 150ಕ್ಕೂ ಹೆಚ್ಚು ಸಸ್ಯಗಳನ್ನು…
ಹೋಟೆಲ್‌ಗಳಲ್ಲಿ ಬಳಕೆಯಾದ ಅಡುಗೆ ಎಣ್ಣೆ ಸಂಗ್ರಹಣೆ ಮತ್ತು ವಿಲೇವಾರಿಗೆ ಮೂರು ತಿಂಗಳೊಳಗೆ ಅಧಿಕೃತ…