ರೈತರ ಹಿತಾಸಕ್ತಿ ರಕ್ಷಣೆಗಾಗಿ ಪ್ರತಿ ಜಿಲ್ಲೆಗಳಲ್ಲಿ ರೈತರಿಗೆ ತರಬೇತಿ ಕೇಂದ್ರ ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತರಬೇತಿ ಕೇಂದ್ರ ತೆರೆದು, ಮಣ್ಣು ಪರೀಕ್ಷೆ ಹೆಚ್ಚಿಸಲು ಯೋಜಿಸಲಾಗಿದೆ. ಮುಂದಿನ ವರ್ಷದಿಂದ ಎರಡು ಲಕ್ಷ ರೈತರಿಗೆ ತರಬೇತಿ, ಐದು ಲಕ್ಷ ಮಣ್ಣು ಮಾದರಿ ಪರೇಕ್ಷೆಗೆ ಒಳಪಡಿಸುವ ಗುರಿ ಹೊಂದಲಾಗಿದೆ ಎಂದರು. ರಾಜ್ಯ ಕೃಷಿ ಅಭಿವೃದ್ಧಿ ಸಂಸ್ಥೆಯ ಮೂಲಕ ಆಧುನಿಕ ಕೃಷಿ ಹಾಗೂ ಪರಿಕರಗಳ ಬಳಕೆ ಬಗ್ಗೆ ರೈತರಿಗೆ ಮಾಹಿತಿ ನೀಡಲು ಯೋಜಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ರೈತರ ಅನುಕೂಲಕ್ಕಾಗಿ ಇನ್ನು ಹತ್ತು ಹಲವು ಹೊಸ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿರುವುದಾಗಿ ಹೇಳಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement