ಕರಾವಳಿಯಲ್ಲಿ ಮುಂದುವರಿದ ಮಳೆ | ಇನ್ನೂ ಎರಡು ದಿನ “ಮಳೆ ಎಚ್ಚರಿಕೆ” | ಕೇರಳದಲ್ಲಿ ಮಳೆ ದುರ್ಘಟನೆಗೆ 4 ಮಂದಿ ಬಲಿ | ಚಿಕ್ಕಬಳ್ಳಾಪುರದಲ್ಲಿ ಮಳೆಗಾಗಿ ಪ್ರಾರ್ಥನೆ |

July 18, 2024
8:54 PM
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಇಲಾಖೆಗಳು ಕೈಗೊಂಡಿವೆ.

ಕರಾವಳಿಯಲ್ಲಿ ಜಿಲ್ಲೆಗಳಲ್ಲಿ‌ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಮತ್ತೆ ಎರಡು ದಿನ ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ. ಹೀಗಾಗಿ ಮುಂಜಾಕ್ರತಾ ಕ್ರಮವಾಗಿ ಜು.19 ರಂದು ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

Advertisement
Advertisement
Advertisement

ಮಳೆಯ ಅಬ್ಬರವು ಮಲೆನಾಡು-ಕರಾವಳಿ ಭಾಗದಲ್ಲಿ ಜೋರಾಗಿತ್ತು.ಗುರುವಾರ ಸುರಿದ ಭಾರಿ ಮಳೆಗೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಂಪರ್ಕ ರಸ್ತೆ ಕಡಿತಗೊಂಡಿದೆ. ದೇವಳದ ಪಕ್ಕದಲ್ಲಿರುವ ಕಪಿಲಾ ನದಿ ತುಂಬಿ ಹರಿಯುತ್ತಿದ್ದು, ಭಾರಿ ಮಳೆಗೆ ಕಿಂಡಿ ಅಣೆಕಟ್ಟು ಮುಳುಗಡೆಯಾಗಿದೆ.  ದೇವಳದ ಅಂಗಣಕ್ಕೆ ನೀರು ಹರಿದು ಬಂದಿದೆ.

Advertisement

ಕೇರಳದಲ್ಲಿ  ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಮತ್ತೆ ನಾಲ್ವರು ಬಲಿಯಾಗಿದ್ದು ,  ಕಳೆದ ಎರಡು ದಿನಗಳಲ್ಲಿ ಸಂಭವಿಸಿದ ಸಾವುಗಳ ಒಟ್ಟು ಸಂಖ್ಯೆ 10ಕ್ಕೇ ಏರಿಕೆಯಾಗಿದೆ.

ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನವಿಡೀ ಮಳೆಯಾಗಿದೆ. ಹಲವು ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಭಾರೀ ಮಳೆ‌ ಹಿನ್ನೆಲೆಯಲ್ಲಿ ಶೃಂಗೇರಿಯಿಂದ ಹೊರನಾಡಿಗೆ ಹೋಗುವ ಮುಖ್ಯ ರಸ್ತೆ ಬಂದ್​ ಆಗಿದೆ. ಸಂಪೂರ್ಣ ರಸ್ತೆ ಸಂಪರ್ಕ ಕಡಿತವಾಗಿದೆ.

Advertisement

ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಮನೆಗಳಿಗೆ ಹಾನಿ ಸಂಭವಿಸಿವೆ. ಉತ್ತರಕನ್ನಡ  ಜಿಲ್ಲೆಯಲ್ಲಿ ಮಳೆ‌‌ ಮುಂದುವರಿದಿದ್ದು, ನದಿಗಳು ಅಪಾಯದ‌‌ ಮಟ್ಟ ಮೀರಿ ಹರಿಯುತ್ತಿವೆ. ಹಲವೆಡೆ ಗುಡ್ಡ ಕುಸಿಯುತ್ತಿದೆ.

ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜೀವನದಿ ಕಾವೇರಿ ಭೋರ್ಗರೆದು ಹರಿಯುತ್ತಿದ್ದಾಳೆ. ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ.

Advertisement

ಶಿವಮೊಗ್ಗದಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜುಲೈ 19ರ ಶುಕ್ರವಾರವೂ ಜಿಲ್ಲೆಯ ನಾಲ್ಕು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದ ಹಲವು ಕಡೆ ಉತ್ತಮ ಮಳೆಯಾಗುತ್ತಿದ್ದರೂ  ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿಯೂ ನಿರೀಕ್ಷೆಯಂತೆ ಮಳೆಯಾಗಿಲ್ಲ. ರೈತರು ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದತ್ತ ವರುಣ ಕರುಣೆ ತೊರಲಿ ಎಂದು ಚಿಕ್ಕಬಳ್ಳಾಪುರ ನಗರದ ಶ್ರೀ ಮಹಾಕಾಳಿ ದೇವಸ್ಥಾನಲ್ಲಿ ಮಳೆಗಾಗಿ ಪ್ರಾರ್ಥಿಸಿ, ವಿವಿಧ ದೇವರುಗಳ ಕಲ್ಯಾಣೋತ್ಸವ ನಡೆಸಲಾಯಿತು.

Advertisement

Advertisement

 

Advertisement

There is heavy rainfall in the coastal districts, prompting the Meteorological Department to issue a red alert for the next two days. As a precautionary measure, a school holiday has been declared in Udupi and Kodagu districts on June 19.

The heavy rain in the Malenadu-Coastal region has caused the connecting road to Sri Shishileswara temple in Shishila village of Belthangadi taluk to be cut off. The Kapila river near the temple is overflowing, and the Kindi dam has been affected by the heavy rainfall.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror