Advertisement
ವೆದರ್ ಮಿರರ್

ಹವಾಮಾನ ವರದಿ | 03-12-2025 | ಕೆಲವು ಕಡೆ ಇಂದು ಮಳೆ ಇದೆ- ಎಲ್ಲೆಲ್ಲಿ ಮಳೆ ನಿರೀಕ್ಷೆ..?

Share

04.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಈ ಮೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಈ ಮಳೆಯ ವಾತಾವರಣವು ಡಿಸೆಂಬರ್ 5ರ ತನಕ ಮುಂದುವರಿಯುವ ಸೂಚನೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 4ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಧಾರವಾಡ, ಗದಗ ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ರಾಜ್ಯದ ದಕ್ಷಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 4 ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ದಿತ್ವಾ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದು, ಇದರ ಪ್ರಭಾವದಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದೆ. ಈಗಿನಂತೆ ಡಿಸೆಂಬರ್ 6ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 hour ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 hour ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

18 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago