04.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಈ ಮೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಈ ಮಳೆಯ ವಾತಾವರಣವು ಡಿಸೆಂಬರ್ 5ರ ತನಕ ಮುಂದುವರಿಯುವ ಸೂಚನೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 4ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಧಾರವಾಡ, ಗದಗ ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ರಾಜ್ಯದ ದಕ್ಷಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 4 ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಿತ್ವಾ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದು, ಇದರ ಪ್ರಭಾವದಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದೆ. ಈಗಿನಂತೆ ಡಿಸೆಂಬರ್ 6ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…