ಅಂಡಮಾನ್ ಕರಾವಳಿಯಲ್ಲಿ ಚಂಡಮಾರುತ ಹಾಗೂ ಧಾರಾಕಾರ ಮಳೆ ಉಂಟಾಗಿದ್ದು. ಈ ಪರಿಣಾಮದಿಂದ ರಾಜ್ಯದಲ್ಲಿ ಕೂಡಾ ಎಡೆಬಿಡದೆ ಮಳೆ ಸುರಿಯುತ್ತಿದೆ. ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ವಿಜಯಪುರ, ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ರೈತರು ಕಂಗಲಾಗಿದ್ದಾರೆ. ರಾತ್ರಿಯಿಡೀ ಸುರಿದ ಮಳೆಗೆ ಟೊಮ್ಯಾಟೋ, ಬದನೆ ಬೆಳೆ ಕೊಳೆಯೋದಕ್ಕೆ ಶುರುವಾಗಿದೆ, ಮಾತ್ರವಲ್ಲ ವಾಹನ ಸಂಚಾರ, ಹೂವಿನ ಕೃಷಿಕರು ಸಹ ವರುಣನ ಹೊಡೆತಕ್ಕೆ ಕಂಗಾಲಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಕೂಡಾ ಅಡಿಕೆ ಬೆಳೆಗಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಯಿಂದ ದಾವಣಗೆರೆ ತಾಲೂಕು, ಚನ್ನಗಿರಿ, ಹರಿಹರ, ಮಲೇಬೆನ್ನೂರು ಭಾಗದಲ್ಲಿ ಭತ್ತ ನಾಶವಾಗಿದೆ.
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನಲ್ಲಿ ಮಳೆಯ ಹೊಡೆತಕ್ಕೆ ಭತ್ತದ ಬೆಳೆ ಅಪಾರ ಪ್ರಮಾಣದಲ್ಲಿ ನಾಶವಾಗಿದೆ. ಹಾನಿಯ ಸಮಗ್ರ ವರದಿ ನೀಡುವಂತೆ ಕಂದಾಯ ಮತ್ತು ಕೃಷಿ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಕೈ ಸೇರಿದ ಬಳಿಕ ರೈತರಿಗೆ ಪರಿಹಾರ ಒದಗಿಸಲಾಗುವುದು ಎಂದು ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಕಾರಟಗಿ ಹೋಬಳಿಯ 80 ಹೆಕ್ಟೇರ್, ಸಿದ್ದಾಪುರ ಹೋಬಳಿ ವ್ಯಾಪ್ತಿಯ 858 ಹೆಕ್ಟೇರ್ ಪ್ರದೇಶದಲ್ಲಿನ ಭತ್ತದ ಬೆಳೆ ಹಾನಿಗೀಡಾಗಿರುವುದು ಪ್ರಾಥಮಿಕ ವರದಿಯಿಂದ ತಿಳಿದಿದೆ ಎಂದು ಹೇಳಿದ್ದಾರೆ.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…