Advertisement
ವೆದರ್ ಮಿರರ್

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

Share

14.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹ ಇರಬಹುದು. ಕರಾವಳಿ ತೀರ ಭಾಗಗಳ ಕೆಲವು ಕಡೆ ಉತ್ತಮ ಮಳೆಯ ಸಾಧ್ಯತೆ ಇದೆ.
ಈಗಿನಂತೆ ವಾಯುಭಾರ ಕುಸಿತ ಈ ಮಳೆಯು ಆಗಸ್ಟ್ 21ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 17ರಿಂದ 19ರ ತನಕ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಪ್ರಮಾಣ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆ ಇರಬಹುದು.

ಒಳನಾಡು : ಇವತ್ತು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಯಾದಗಿರಿ, ರಾಯಚೂರು ಜಿಲ್ಲೆಗಳ ಆಂದ್ರಾ ಗಡಿಭಾಗಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರದ ಒಂದೆರಡು ಕಡೆ ಮಾತ್ರ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮೂಲಕ ಆಗಸ್ಟ್ 20,21ರಂದು ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

6 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

19 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

19 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

19 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

20 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

20 hours ago