MIRROR FOCUS

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ ಇದೇ ವೇಳೆ ಮಳೆ ಹಲವು ಕಡೆ ಆವಾಂತರ(Rain effect) ಸೃಷ್ಟಿಸಿದೆ. ಸಿಡಿಲು ಬಡಿದು ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಲೋಕಾಪೂರ ಪಟ್ಟಣದ ಸಮೀಪದ ಮಲ್ಲಾಪೂರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಭಾಗ್ಯಶ್ರೀ ಮಲ್ಲಪ್ಪ ಪಡೆಪ್ಪನವರ (16) ಮೃತ ಬಾಲಕಿ. ಸಂಜೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ. 

Advertisement
Advertisement
ಗಡಿ ಜಿಲ್ಲೆಯಲ್ಲಿ ಭರ್ಜರಿ ಮಳೆ: ವಾಹನ ಸವಾರರ ಪರದಾಟ: ಶುಕ್ರವಾರ ಸಂಜೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಭರ್ಜರಿ ಮಳೆಯಾಗಿದ್ದು, ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿ ಹರಿದ ಪರಿಣಾಮ ವಾಹನ ಸವಾರರು ಪರದಾಡಿದರು. ಈ ಹೆದ್ದಾರಿಯು ಬೇಗೂರಿನಲ್ಲಿ ಹಾದು ಹೋಗಲಿದ್ದು ಗುಂಡ್ಲುಪೇಟೆ, ಕೇರಳ, ತಮಿಳುನಾಡಿಗೆ ತೆರಳುವವರು ನೀರಿನ ಮಧ್ಯೆ ವಾಹನ ಚಲಾಯಿಸಲು ಪ್ರಯಾಸಪಟ್ಟರು. ಬೇಗೂರು, ಬೆಳಚಲವಾಡಿ ಸುತ್ತಮುತ್ತಲೂ ಕೂಡ ಭರ್ಜರಿ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಅಂತರ್ಜಲ ಮಟ್ಟ ಹೆಚ್ಚಿ ಕೊಳವೆಬಾವಿಗಳಲ್ಲಿ ಮತ್ತೆ ನೀರಿನ ಸಿಂಚನ ಹೊಮ್ಮುವ ನಿರೀಕ್ಷೆ ವ್ಯಕ್ತವಾಗಿದೆ. ಇನ್ನು, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ, ಬಂಡಳ್ಳಿ, ಅಜ್ಜಿಪುರ ಸುತ್ತಮುತ್ತ ಒಂದೂವರೆ ತಾಸು ಭರ್ಜರಿ ಮಳೆಯಾಗಿದೆ.
ಹನೂರು ತಾಲೂಕಿನಲ್ಲಿ ಕಳೆದ 10 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.‌ ಆದರೆ, ಕೌದಳ್ಳಿ ಗ್ರಾಮದಲ್ಲಿ ಪ್ರತಿ ಮಳೆಯೂ ಅವಾಂತರ ಸೃಷ್ಟಿಸುತ್ತಿದೆ. ಕೌದಳ್ಳಿಯಲ್ಲಿ ಚರಂಡಿ ವ್ಯವಸ್ಥೆ ಸರಿಯಾಗಿರದ ಕಾರಣ ನಿನ್ನೆ ಸುರಿದ ಭರ್ಜರಿ ಮಳೆಗೆ ಚರಂಡಿ ತುಂಬಿ ಹೊಳೆಯಂತೆ ಅಂಗಡಿ-‌ಮಳಿಗೆಗಳಿಗೆ ನುಗ್ಗಿ ವ್ಯಾಪಾರಿಗಳನ್ನು ಪರದಾಡುವಂತೆ ಮಾಡಿದೆ.

ಸೊರಬದಲ್ಲಿ ಸಿಡಿಲು ಬಡಿದು ಎತ್ತು ಸಾವು: ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣ ಸೇರಿ ತಾಲೂಕಿನಾದ್ಯಂತ ಶುಕ್ರವಾರ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಸೊರಬದ ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ. ಗ್ರಾಮದ ಮಂಜಪ್ಪ ಅವರು ಅಮೃತ್‍ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು. ಜಮೀನಿನಲ್ಲಿ ಜಾನುವಾರುಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದೆ. ಇದರಿಂದ ರೈತನಿಗೆ ಸುಮಾರು 55 ಸಾವಿರಕ್ಕೂ ಹೆಚ್ಚು ನಷ್ಟವಾಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಶು ಆಸ್ಪತ್ರೆಯ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುರುವಾರ ರಾತ್ರಿ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಕಾರಟಗಿ ತಾಲ್ಲೂಕಿನಲ್ಲಿ ನೂರಾರು ಮನೆಗಳಿಗೆ ಹಾನಿಯಾಗಿದ್ದು, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ರಾಮನಗರದಲ್ಲಿ ತೀವ್ರ ಹಾನಿಗೀಡಾದ 14 ಮನೆಗಳಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿ ಪರಿಶೀಲಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎರಡು ದಿನಗಳಿಂದ ಸಾಮಾನ್ಯ ಮಳೆ | ಗಾಳಿಯೊಂದಿಗೆ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…

53 minutes ago

ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ

ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…

60 minutes ago

ಮಾಂಗಲ್ಯ ದೋಷದ ಭೀತಿ | ವಿವಾಹ ಜೀವನದ ರಕ್ಷಣೆಗೆ ಜ್ಯೋತಿಷ್ಯ ಉಪಾಯಗಳು | ಮಾಂಗಲ್ಯ ದೋಷದ ಜ್ಯೋತಿಷ್ಯ ಮಹತ್ವ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…

1 hour ago

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

9 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

9 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

11 hours ago