Advertisement
ಸುದ್ದಿಗಳು

ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |

Share

03.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಈ ಮಳೆಯ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಈಗಿನಂತೆ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಬೆಳಗಾವಿ, ದಾವಣಗೆರೆ ಬಳ್ಳಾರಿ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ತಿರುಗುವಿಕೆ ಮತ್ತು ಅರಬ್ಬಿ ಸಮುದ್ರದ ನೈರುತ್ಯ ಕಡೆಯಿಂದ ಬೀಸುತ್ತಿರುವ ಗಾಳಿಯ ಕಾರಣದಿಂದ ಈಗಿನ ಮಳೆಯ ವಾತಾವರಣವು ಉಂಟಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

8 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

21 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

21 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

22 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

22 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

22 hours ago