Advertisement
MIRROR FOCUS

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

Share

ಪ್ರಸಾರ ಭಾರತಿಯ ದೂರದರ್ಶನ ಚಂದನ ವಾಹಿನಿಯು ವಿಭಿನ್ನ ಹಾಗೂ ವಿನೂತನ ಪ್ರಯತ್ನವಾಗಿ “ರೈತ ರತ್ನ” ರಿಯಾಲಿಟಿ ಶೋ ಕಾರ್ಯಕ್ರಮವನ್ನು ಆರಂಭಿಸಿದೆ. ಕೃಷಿ ಕ್ಷೇತ್ರದ ಸಾಧಕರನ್ನು ಗುರುತಿಸಿ, ಅವರ ಸಾಧನೆಗಳನ್ನು ಜನತೆಗೆ ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ವಿಶೇಷ ಕಾರ್ಯಕ್ರಮವನ್ನು ದೂರದರ್ಶನ, ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ಇಲಾಖೆ ಸಂಯುಕ್ತವಾಗಿ ಸಂಯುಕ್ತವಾಗಿ ಆಯೋಜಿಸಿವೆ.

ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ್  ಅವರು, “ಕೃಷಿಕರು ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಈ ವೇದಿಕೆಯ ಮೂಲಕ ಜನತೆಗೆ ಪರಿಚಯಿಸಲಾಗುತ್ತದೆ. ವಿಶೇಷವಾಗಿ ಯುವಕರನ್ನು ಕೃಷಿಯತ್ತ ಆಕರ್ಷಿಸುವುದು ನಮ್ಮ ಪ್ರಮುಖ ಗುರಿ” ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದ ಸರಣಿ ಪ್ರಸಾರ ಬಳಿಕ ಅತ್ಯುತ್ತಮ ಸಾಧನೆ ತೋರಿದ ಮೂವರು ಕೃಷಿಕರಿಗೆ “ರೈತ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಇದೇ ವೇಳೆ ಬೆಂಗಳೂರು ದೂರದರ್ಶನ ಕೇಂದ್ರದ ಮುಖ್ಯಸ್ಥ ಎ. ಹನುಮಂತ್  ಮಾತನಾಡಿ, “ಗ್ರಾಮೀಣ ಸೊಗಡಿನ ಈ ಕಾರ್ಯಕ್ರಮ ದೂರದರ್ಶನ ಚಂದನ ವಾಹಿನಿಯ ಜೊತೆಗೆ ಯೂಟ್ಯೂಬ್‌ನಲ್ಲಿಯೂ ಲಭ್ಯವಾಗಲಿದೆ” ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Doordarshan Chandana has launched an innovative reality show titled “Raita Ratna” to recognize and showcase successful farmers and agricultural achievers. The initiative aims to inspire youth to take up agriculture, with top performers being honored with awards.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

17 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago