ಪುತ್ತೂರಿನಲ್ಲಿ ಕೃಷಿ ಯಂತ್ರ ಮೇಳ | ರೈತರೊಂದಿಗೆ ಸಂವಾದ | ರೈತರ ನಿರೀಕ್ಷೆಗಳ ಕಡೆಗೆ ಲಕ್ಷ್ಯ |

December 13, 2022
10:46 PM

ಕೃಷಿಕನ ಬದುಕು ದೇಶವನ್ನು ಬದುಕಿಸುವುದು. ಕೃಷಿಕನನ್ನು ಸಮಾಜವು ಬದುಕಿಸಬೇಕಾಗಿದೆ. ಇದಕ್ಕಾಗಿ ಒಂದಾಗಿ ಮಾತನಾಡಬೇಕಿದೆ, ಹೊಸ ಹೊಸ ತಂತ್ರಜ್ಞಾನಗಳನ್ನು, ಯಂತ್ರಗಳ ಪರಿಚಯವನ್ನು ಮಾಡಬೇಕಿದೆ. ಈ ಕೆಲಸ ಯಂತ್ರ ಮೇಳದ ಮೂಲಕ ನಡೆಸಲಾಗುತ್ತಿದೆ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

Advertisement

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಕ್ಯಾಂಪ್ಕೋ  ಸಹಯೋಗದೊಂದಿಗೆ ನಡೆಸಲಾಗುವ 5ನೇ ಕೃಷಿ ಯಂತ್ರಮೇಳದ ರೂಪು ರೇಷೆಯನ್ನು, ಕೃಷಿಕರ ನಿರೀಕ್ಷೆಗಳನ್ನು ಕ್ರೋಢೀಕರಿಸುವ  ಸಲುವಾಗಿ ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ರೈತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತಾಡಿದರು.  ಕೃಷಿಕರಿಗೆ ಬಳಸುವುದಕ್ಕೆ ಅನುಕೂಲಕರವಾದ ಸಣ್ಣ ಸಣ್ಣ ಯಂತ್ರೋಪಕರಣಗಳ ಲಭ್ಯತೆ ಮತ್ತು ಅದರ ಬಳಕೆಗೆ ಪೂರಕವಾದ ಮಾಹಿತಿಗಳು ಸುಲಭವಾಗಿ ದೊರೆಯುವಂತೆ ಮಾಡುವುದು ಐದನೇ ಯಂತ್ರಮೇಳದ ಮೂಲ ಉದ್ದೇಶವೂ ಆಗಿದೆ ಎಂದ ಡಾ.ಕಲ್ಲಡ್ಕ ಪ್ರಭಾಕರ ಭಟ್‌, ದಿನ ದಿನವೂ ಹೊಸ ಹೊಸ ತಂತ್ರಜ್ಞಾನಗಳು ಅಭಿವೃದ್ಧಿಯಾಗುತ್ತಿದೆ ತನ್ಮೂಲಕ ನೂತನ ಯಂತ್ರಗಳ ಆವಿಷ್ಕಾರವಾಗುತ್ತಿದೆ ಇವೆಲ್ಲವನ್ನೂ ಒಂದೇ ಸೂರಿನಡಿ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಗರಿಷ್ಟ ಪ್ರಯತ್ನಗಳು ನಡೆಯುತ್ತಿವೆ ಎಂದರು.

ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮಾತನಾಡಿ ಬೆಳೆಗಾರರ ಹಿತ ಕಾಪಾಡುವುದಕ್ಕೆ ಕ್ಯಾಂಪ್ಕೋ ಸಂಸ್ಥೆಯು ಬದ್ದವಾಗಿದೆ ಎಂದರು. ಅಡಿಕೆ, ತೆಂಗು, ಬಾಳೆ, ಕಾಳುಮೆಣಸು, ರಬ್ಬರ್ ಮುಂತಾದವಲ್ಲದೆ ಪರ್ಯಾಯ ಬೆಳೆಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ನಡೆಸುವ ಬಗ್ಗೆ ಸಂಸ್ಥೆಯು ಯೋಚಿಸುತ್ತಿದೆ ಎಂದರು. ಸಣ್ಣ ರೈತರಿಗೆ ನೆರವಾಗುವ ಕಡಿಮೆ ವೆಚ್ಚದ ಸಣ್ಣ ಉಪಕರಣಗಳ ಲಭ್ಯತೆಯ ಕೊರತೆಯ ಬಗ್ಗೆ ಅನೇಕ ರೈತರು ಹೇಳಿದ್ದಾರೆ ಇದರ ಬಗ್ಗೆ ಗಮನಹರಿಸಲಾಗುವುದು ಎಂದರು.

ಕ್ಯಾಂಪ್ಕೋ ಸಂಸ್ಥೆಯ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ಕಾರ್ಯನಿರ್ವಾಹಕ ನಿರ್ದೇಶಕ ಕೃಷ್ಣ ಕುಮಾರ್.ಎಚ್.ಎಮ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕ ಸುಬ್ರಹ್ಮಣ್ಯ ಭಟ್.ಟಿ.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಸಂವಾದ ಕಾರ್ಯಕ್ರಮವನ್ನು ನಿರ್ವಹಿಸಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ವಂದಿಸಿದರು. ಕಾಲೇಜಿನ ಹಿರಿಯ ಪ್ರಯೋಗಾಲಯ ಬೋಧಕ ಹರಿಪ್ರಸಾದ್.ಡಿ ಕಾರ್ಯಕ್ರಮ ನಿರ್ವಹಿಸಿದರು.

ಸಂವಾದದಲ್ಲಿ ಕೃಷಿಕರ ನಿರೀಕ್ಷೆಗಳು ಹಾಗೂ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಯಿತು. ಯಂತ್ರ ಮೇಳವನ್ನು ರೈತ ಸ್ನೇಹಿಯಾಗಿ ಹೇಗೆ ಮಾಡಬಹುದು  ಎಂಬುದರ ಬಗ್ಗೆ ಗುಣಮಟ್ಟದ ಚರ್ಚೆ ನಡೆಯಿತು.

 

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ
April 14, 2025
7:40 PM
by: The Rural Mirror ಸುದ್ದಿಜಾಲ
ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ
April 14, 2025
7:28 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |
April 14, 2025
12:45 PM
by: ಸಾಯಿಶೇಖರ್ ಕರಿಕಳ
ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ
April 14, 2025
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group