ಕೃಷಿಕನ ಬದುಕು ದೇಶವನ್ನು ಬದುಕಿಸುವುದು. ಕೃಷಿಕನನ್ನು ಸಮಾಜವು ಬದುಕಿಸಬೇಕಾಗಿದೆ. ಇದಕ್ಕಾಗಿ ಒಂದಾಗಿ ಮಾತನಾಡಬೇಕಿದೆ, ಹೊಸ ಹೊಸ ತಂತ್ರಜ್ಞಾನಗಳನ್ನು, ಯಂತ್ರಗಳ ಪರಿಚಯವನ್ನು ಮಾಡಬೇಕಿದೆ. ಈ ಕೆಲಸ ಯಂತ್ರ ಮೇಳದ ಮೂಲಕ ನಡೆಸಲಾಗುತ್ತಿದೆ ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಕ್ಯಾಂಪ್ಕೋ ಸಹಯೋಗದೊಂದಿಗೆ ನಡೆಸಲಾಗುವ 5ನೇ ಕೃಷಿ ಯಂತ್ರಮೇಳದ ರೂಪು ರೇಷೆಯನ್ನು, ಕೃಷಿಕರ ನಿರೀಕ್ಷೆಗಳನ್ನು ಕ್ರೋಢೀಕರಿಸುವ ಸಲುವಾಗಿ ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ರೈತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತಾಡಿದರು. ಕೃಷಿಕರಿಗೆ ಬಳಸುವುದಕ್ಕೆ ಅನುಕೂಲಕರವಾದ ಸಣ್ಣ ಸಣ್ಣ ಯಂತ್ರೋಪಕರಣಗಳ ಲಭ್ಯತೆ ಮತ್ತು ಅದರ ಬಳಕೆಗೆ ಪೂರಕವಾದ ಮಾಹಿತಿಗಳು ಸುಲಭವಾಗಿ ದೊರೆಯುವಂತೆ ಮಾಡುವುದು ಐದನೇ ಯಂತ್ರಮೇಳದ ಮೂಲ ಉದ್ದೇಶವೂ ಆಗಿದೆ ಎಂದ ಡಾ.ಕಲ್ಲಡ್ಕ ಪ್ರಭಾಕರ ಭಟ್, ದಿನ ದಿನವೂ ಹೊಸ ಹೊಸ ತಂತ್ರಜ್ಞಾನಗಳು ಅಭಿವೃದ್ಧಿಯಾಗುತ್ತಿದೆ ತನ್ಮೂಲಕ ನೂತನ ಯಂತ್ರಗಳ ಆವಿಷ್ಕಾರವಾಗುತ್ತಿದೆ ಇವೆಲ್ಲವನ್ನೂ ಒಂದೇ ಸೂರಿನಡಿ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಗರಿಷ್ಟ ಪ್ರಯತ್ನಗಳು ನಡೆಯುತ್ತಿವೆ ಎಂದರು.
ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮಾತನಾಡಿ ಬೆಳೆಗಾರರ ಹಿತ ಕಾಪಾಡುವುದಕ್ಕೆ ಕ್ಯಾಂಪ್ಕೋ ಸಂಸ್ಥೆಯು ಬದ್ದವಾಗಿದೆ ಎಂದರು. ಅಡಿಕೆ, ತೆಂಗು, ಬಾಳೆ, ಕಾಳುಮೆಣಸು, ರಬ್ಬರ್ ಮುಂತಾದವಲ್ಲದೆ ಪರ್ಯಾಯ ಬೆಳೆಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ನಡೆಸುವ ಬಗ್ಗೆ ಸಂಸ್ಥೆಯು ಯೋಚಿಸುತ್ತಿದೆ ಎಂದರು. ಸಣ್ಣ ರೈತರಿಗೆ ನೆರವಾಗುವ ಕಡಿಮೆ ವೆಚ್ಚದ ಸಣ್ಣ ಉಪಕರಣಗಳ ಲಭ್ಯತೆಯ ಕೊರತೆಯ ಬಗ್ಗೆ ಅನೇಕ ರೈತರು ಹೇಳಿದ್ದಾರೆ ಇದರ ಬಗ್ಗೆ ಗಮನಹರಿಸಲಾಗುವುದು ಎಂದರು.
ಸಂವಾದದಲ್ಲಿ ಕೃಷಿಕರ ನಿರೀಕ್ಷೆಗಳು ಹಾಗೂ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಯಿತು. ಯಂತ್ರ ಮೇಳವನ್ನು ರೈತ ಸ್ನೇಹಿಯಾಗಿ ಹೇಗೆ ಮಾಡಬಹುದು ಎಂಬುದರ ಬಗ್ಗೆ ಗುಣಮಟ್ಟದ ಚರ್ಚೆ ನಡೆಯಿತು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…