ಬಂಟ್ವಾಳ ತಾಲೂಕು ಕೇಪು ಗ್ರಾಮದ ಕಲ್ಲಂಗಳ ನಿವಾಸಿಯಾಗಿರುವ ರಾಜೇಶ್ ರೈ ಕಲ್ಲಂಗಳ (48) ಇವರು ರಾಜ್ಯಪಾಲರಿಂದ ಸಂಜೆ 6.30 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಮುಖ್ಯಮಂತ್ರಿಗಳ ಮತ್ತು ಮುಖ್ಯ ನ್ಯಾಯಮೂರ್ತಿಗಳ ಉಪಸ್ಥಿತಿಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬಾಲ್ಯದಿಂದಲೇ ಸಾಮಾಜಿಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡವರು.
ಕಲಾ ಪೋಷಕರಾಗಿದ್ದು ಯಕ್ಷಗಾನ ಮತ್ತು ಇತರೆ ಕಲೆಗಳ ಬಗ್ಗೆ ಬಹಳಷ್ಟು ಅಭಿಮಾನ ಹೊಂದಿರುತ್ತಾರೆ, ರಾಜೇಶ್ ರೈ ಕಲ್ಲಂಗಳ ಇವರು ಬೆಂಗಳೂರಿನಲ್ಲಿ ಕಳೆದ 23 ವರ್ಷಗಳಿಂದ ಪತ್ನಿ ರೇಷ್ಮಾ ರಾಜೇಶ್ ಮತ್ತು ಇಬ್ಬರು ಮಕ್ಕಳು ಸಾನಿಧ್ಯ ಆರ್ ರೈ ಮತ್ತು ಶಾಶ್ವತ್ ಆರ್ ರೈ ಜೊತೆಗೆ ನೆಲೆಸಿದ್ದಾರೆ.
ಹೈಕೋರ್ಟ್ ನ್ಯಾಯಮೂರ್ತಿಯಾಗಿ ಅತಿ ಸಣ್ಣ ವಯಸ್ಸಿನಲ್ಲಿ ಆಯ್ಕೆಗೊಂಡ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಪ್ರಥಮ ಮತ್ತು ಅತಿ ಚಿಕ್ಕ ವಯಸ್ಸಿನ ಹೈಕೋರ್ಟ್ ನ್ಯಾಯಮೂರ್ತಿ ಎಂದು ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸದಲ್ಲಿ ನೇರವಾಗಿ ಅತಿ ಸಣ್ಣ ವಯಸ್ಸಿನಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ಮೊದಲಿಗರಾಗಿದ್ದಾರೆ.