ಆರೋಪಗಳಿಗೆ ಉತ್ತರಿಸಲು ಬೆಂಗಳೂರಿಗೆ ಆಗಮಿಸಿದ ವೇಳೆ ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಲಾಗಿದೆ.
ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆಯಲ್ಲಿ ಭಾಗಿಯಾಗಿದ್ದ ರಾಕೇಶ್ ಟಿಕಾಯತ್ , ಯುಧ್ವೀರ್ ಸಿಂಗ್ ಮೇಲೆ ಕಪ್ಪು ಬಣ್ಣ ಎರಚಲಾಗಿದೆ. ಹೋರಾಟ ನಿಲ್ಲಿಸಲು ಹಣ ಕೇಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಲು ಹಾಗೂ ಸಭೆ ನಡೆಸಲು ಬೆಂಗಳೂರಿಗೆ ಆಗಮಿಸಿದ್ದರು. ಸಭೆಯಲ್ಲಿ ರಾಕೇಶ್ ಟಿಕಾಯತ್, ಯುದುವೀರ್ ಸಿಂಗ್, ತಮಿಳುನಾಡಿನ ನಲ್ಲಗೌಂಡರ್ ರಾಜ್ಯದ ಪ್ರಮುಖ ರೈತ ಮುಖಂಡರಾದ ಸುರೇಶ್ ಬಾಬು ಪಾಟೀಲ್, ಕೆ.ಟಿ.ಗಂಗಾಧರ್, ಅನುಸೂಯಮ್ಮ, ರಾಜೇಗೌಡ, ಚುಕ್ಕಿ ನಂಜುಂಡಸ್ವಾಮಿ, ಚಿಂತಕರಾದ ಪ್ರೊ ಹಿ.ಶಿ. ರಾಮಚಂದ್ರಗೌಡ, ಪ್ರೊ ರವಿವರ್ಮ ಕುಮಾರ್ ಸೇರಿದಂತೆ ಅನೇಕ ರೈತ ಹೋರಾಟಗಾರರು ಇದ್ದರು.ಮಸಿ ಬಳಿದ ವ್ಯಕ್ತಿಯನ್ನು ಹಿಡಿದು ಥಳಿಸಲಾಗಿದೆ. ರಾಜ್ಯಕ್ಕೆ ಆಗಮಿಸಿದ ರೈತ ನಾಯಕನಿಗೆ ಸೂಕ್ತ ಭದ್ರತೆಯನ್ನು ರಾಜ್ಯ ಸರ್ಕಾರ ನೀಡಿಲ್ಲ ಎಂಬ ಆರೋಪ ವ್ಯಕ್ತವಾಗಿದೆ.
ರೈತ ಹೋರಾಟ ನಿಲ್ಲಿಸಲು 3 ಸಾವಿರ ಕೋಟಿ ಕೇಳಿದ ಡೀಲ್ ಬಗ್ಗೆ ಖಾಸಗಿ ಸುದ್ದಿವಾಹಿನಿಯಲ್ಲಿ ಕಾರ್ಯಕ್ರಮ ಪ್ರಸಾರವಾಗಿತ್ತು. ಇದೇ ಕಾರಣಕ್ಕಾಗಿ ಸ್ಪಷ್ಟೀಕರಣ ನೀಡಲು ಬೆಂಗಳೂರಿನತ್ತ ರಾಷ್ಟ್ರೀಯ ರೈತ ನಾಯಕರು ಆಗಮಿಸಿದ್ದರು.
#WATCH Black ink thrown at Bhartiya Kisan Union leader Rakesh Tikait at an event in Bengaluru, Karnataka pic.twitter.com/HCmXGU7XtT
— ANI (@ANI) May 30, 2022