#OneNationOneElection | ಒಂದು ರಾಷ್ಟ್ರ, ಒಂದು ಚುನಾವಣೆ | ಸಾಧಕ-ಭಾದಕ ಏನು..? | ಅಧ್ಯಯನಕ್ಕಾಗಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಿದ ಕೇಂದ್ರ |

September 1, 2023
12:23 PM
‘ಒಂದು ರಾಷ್ಟ್ರ-ಒಂದು ಚುನಾವಣೆ’ ಮಸೂದೆ ಬಗ್ಗೆ ರಾಜ್ಯ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಾವ ರೀತಿಯ ಅಭಿಪ್ರಾಯ ಇದೆ, ಜತೆಗೆ ಕೇಂದ್ರದ ಈ ನಿಲುವಿನ ಬಗ್ಗೆ ಪಕ್ಷಗಳು ಹಾಗೂ ಸಾರ್ವಜನಿಕ ವಲಯದಲ್ಲಿ ಯಾವ ರೀತಿಯಲ್ಲಿ ಚರ್ಚೆಯಾಗುತ್ತಿದೆ ಎಂಬುದನ್ನು ಅಧ್ಯಯನ ನಡೆಸಲು ಕೇಂದ್ರವು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯೊಂದನ್ನು ರಚಿಸಿದೆ.

ಒಂದು ರಾಷ್ಟ್ರ-ಒಂದು ಚುನಾವಣೆ – ಇದು ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ವಿಷಯ. ಆದರೆ ಪಕ್ಷಗಳ ಒಮ್ಮತದ ಅಭಿಪ್ರಾಯ ಇಲ್ಲದ ಕಾರಣ ಇದು ಇನ್ನೂ ಜಾರಿಗೆ ಬರಲು ಮೀನಮೇಷ ಎಣಿಸುತ್ತಿದೆ. ಇದೀಗ ಒಂದು ರಾಷ್ಟ್ರ-ಒಂದು ಚುನಾವಣೆಯ ಸಾಧ್ಯತೆಯನ್ನು ಅಧ್ಯಯನ ಮಾಡಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ರಚಿಸಲಿದೆ. 

Advertisement
Advertisement
Advertisement
Advertisement

ಸೆ.18ರಿಂದ ಸೆ.22ರವರೆಗೆ ವಿಶೇಷ ಸಂಸತ್​​ ಸದನ ನಡೆಯಲಿದೆ ಎಂದು ಕೇಂದ್ರ ಸರ್ಕಾರ ನಿನ್ನೆ ತಿಳಿಸಿಳಿತ್ತು. ಹಲವು ಮಸೂದೆಯನ್ನು ಮಂಡಿಸಲು ಬಾಕಿ ಇರುವ ಕಾರಣ ಈ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಇದೀಗ ಇದಕ್ಕೂ ಮುನ್ನ ಒಂದು ರಾಷ್ಟ್ರ-ಒಂದು ಚುನಾವಣೆಯ ಸಾಧ್ಯತೆಯನ್ನು ಅಧ್ಯಯನ ಮಾಡಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ರಚಿಸಲು ನಿರ್ಧರಿಸಿದೆ. ದೆಹಲಿಯ ಜಿ 20 ಶೃಂಗಸಭೆಯ ನಂತರ ವಿಶೇಷ ಅಧಿವೇಶನ ನಡೆಯಲಿದೆ. ಜಿ.20 ಭಾರತದ ಅಂತರಾಷ್ಟ್ರೀಯ ಸ್ಥಾನಮಾನವನ್ನು ಗುರುತಿಸುವ ಸಂಕೇತವೆಂದು ಸರ್ಕಾರ ಹೇಳಿದೆ.

Advertisement

ಈ ವಿಶೇಷ ಅಧಿವೇಶನದ ಶಾಸಕಾಂಗ ಕಾರ್ಯಸೂಚಿಯ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಈ ಅಧಿವೇಶ ಮುಂದಿನ ಸಾರ್ವತ್ರಿಕ ಚುನಾವಣೆಗಳಿಗೆ ಬಲವಾದ ರಾಜಕೀಯ ಸಂದೇಶವನ್ನು ನೀಡುವಂತಿದೆ ಎಂದು ಹೇಳಲಾಗಿದೆ. ಇನ್ನು ಈಗಾಗಲೇ ಚರ್ಚೆಯಲ್ಲಿರುವ ‘ಒಂದು ರಾಷ್ಟ್ರ-ಒಂದು ಚುನಾವಣೆ’ ಮಸೂದೆಯು ಸ್ವಲ್ಪ ಸಮಯದವರೆಗೆ ಸರ್ಕಾರದ ಕಾರ್ಯಸೂಚಿಯಲ್ಲಿರಲಿದೆ. ಈ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ನೀಡುತ್ತದೆ ಎಂದು ಹೇಳಲಾಗಿದೆ. ಇದೀಗ ಈ ಬಗ್ಗೆ ರಾಜ್ಯ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಾವ ರೀತಿಯ ಅಭಿಪ್ರಾಯ ಇದೆ ಜತೆಗೆ ಕೇಂದ್ರದ ಈ ನಿಲುವಿನ ಬಗ್ಗೆ ಪಕ್ಷಗಳು ಹಾಗೂ ಸಾರ್ವಜನಿಕ ವಲಯದಲ್ಲಿ ಯಾವ ರೀತಿಯಲ್ಲಿ ಚರ್ಚೆಯಾಗುತ್ತಿದೆ ಎಂಬುದನ್ನು ಅಧ್ಯಯನ ನಡೆಸಲು ಕೇಂದ್ರವು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯೊಂದನ್ನು ರಚಿಸಿದೆ.

Source:  ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಅರಣ್ಯದಿಂದ ಕೂಡಿದ ಗ್ರಾಮೀಣ ಭಾಗಕ್ಕೂ ನೀರು…! | ಕರಾವಳಿ ಜಿಲ್ಲೆಯ ಈಗಿನ ದೊಡ್ಡ ಯೋಜನೆ ಇದು | ಯಾಕೆ ಎಲ್ಲರೂ ಮೌನವಾಗಿದ್ದಾರೆ..? | ಈ ಕೊಳವೆಯಲ್ಲಿ ಹರಿಯುವುದು ನೀರೋ.. ಹಣವೋ..?
February 1, 2025
8:07 AM
by: ಮಹೇಶ್ ಪುಚ್ಚಪ್ಪಾಡಿ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror