ಒಂದು ರಾಷ್ಟ್ರ-ಒಂದು ಚುನಾವಣೆ – ಇದು ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ವಿಷಯ. ಆದರೆ ಪಕ್ಷಗಳ ಒಮ್ಮತದ ಅಭಿಪ್ರಾಯ ಇಲ್ಲದ ಕಾರಣ ಇದು ಇನ್ನೂ ಜಾರಿಗೆ ಬರಲು ಮೀನಮೇಷ ಎಣಿಸುತ್ತಿದೆ. ಇದೀಗ ಒಂದು ರಾಷ್ಟ್ರ-ಒಂದು ಚುನಾವಣೆಯ ಸಾಧ್ಯತೆಯನ್ನು ಅಧ್ಯಯನ ಮಾಡಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ರಚಿಸಲಿದೆ.
ಸೆ.18ರಿಂದ ಸೆ.22ರವರೆಗೆ ವಿಶೇಷ ಸಂಸತ್ ಸದನ ನಡೆಯಲಿದೆ ಎಂದು ಕೇಂದ್ರ ಸರ್ಕಾರ ನಿನ್ನೆ ತಿಳಿಸಿಳಿತ್ತು. ಹಲವು ಮಸೂದೆಯನ್ನು ಮಂಡಿಸಲು ಬಾಕಿ ಇರುವ ಕಾರಣ ಈ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಇದೀಗ ಇದಕ್ಕೂ ಮುನ್ನ ಒಂದು ರಾಷ್ಟ್ರ-ಒಂದು ಚುನಾವಣೆಯ ಸಾಧ್ಯತೆಯನ್ನು ಅಧ್ಯಯನ ಮಾಡಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ಕೇಂದ್ರ ರಚಿಸಲು ನಿರ್ಧರಿಸಿದೆ. ದೆಹಲಿಯ ಜಿ 20 ಶೃಂಗಸಭೆಯ ನಂತರ ವಿಶೇಷ ಅಧಿವೇಶನ ನಡೆಯಲಿದೆ. ಜಿ.20 ಭಾರತದ ಅಂತರಾಷ್ಟ್ರೀಯ ಸ್ಥಾನಮಾನವನ್ನು ಗುರುತಿಸುವ ಸಂಕೇತವೆಂದು ಸರ್ಕಾರ ಹೇಳಿದೆ.
ಈ ವಿಶೇಷ ಅಧಿವೇಶನದ ಶಾಸಕಾಂಗ ಕಾರ್ಯಸೂಚಿಯ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಈ ಅಧಿವೇಶ ಮುಂದಿನ ಸಾರ್ವತ್ರಿಕ ಚುನಾವಣೆಗಳಿಗೆ ಬಲವಾದ ರಾಜಕೀಯ ಸಂದೇಶವನ್ನು ನೀಡುವಂತಿದೆ ಎಂದು ಹೇಳಲಾಗಿದೆ. ಇನ್ನು ಈಗಾಗಲೇ ಚರ್ಚೆಯಲ್ಲಿರುವ ‘ಒಂದು ರಾಷ್ಟ್ರ-ಒಂದು ಚುನಾವಣೆ’ ಮಸೂದೆಯು ಸ್ವಲ್ಪ ಸಮಯದವರೆಗೆ ಸರ್ಕಾರದ ಕಾರ್ಯಸೂಚಿಯಲ್ಲಿರಲಿದೆ. ಈ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಅವಕಾಶ ನೀಡುತ್ತದೆ ಎಂದು ಹೇಳಲಾಗಿದೆ. ಇದೀಗ ಈ ಬಗ್ಗೆ ರಾಜ್ಯ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಾವ ರೀತಿಯ ಅಭಿಪ್ರಾಯ ಇದೆ ಜತೆಗೆ ಕೇಂದ್ರದ ಈ ನಿಲುವಿನ ಬಗ್ಗೆ ಪಕ್ಷಗಳು ಹಾಗೂ ಸಾರ್ವಜನಿಕ ವಲಯದಲ್ಲಿ ಯಾವ ರೀತಿಯಲ್ಲಿ ಚರ್ಚೆಯಾಗುತ್ತಿದೆ ಎಂಬುದನ್ನು ಅಧ್ಯಯನ ನಡೆಸಲು ಕೇಂದ್ರವು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯೊಂದನ್ನು ರಚಿಸಿದೆ.
Source: ಅಂತರ್ಜಾಲ ಮಾಹಿತಿ
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…