ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರಲು ಭಾರತ ಸರ್ಕಾರ ಆರಂಭಿಸಿದ ‘ಆಪರೇಷನ್ ಗಂಗಾ’ ಕಾರ್ಯಾಚರಣೆಗೆ ಶ್ರೀರಾಮಚಂದ್ರಾಪುರ ಮಠ ಟ್ವಿಟ್ಟರ್‍ನಲ್ಲಿ ಸಹಾಯವಾಣಿ ಆರಂಭಿಸುವ ಮೂಲಕ ನೆರವು ನೀಡಿರುವುದು ಸಂತ್ರಸ್ತ ವಿದ್ಯಾರ್ಥಿಗಳ ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾಗಿದೆ.
Advertisement
ಉಕ್ರೇನ್ ಮೇಲೆ ಫೆ.24ರಂದು ರಷ್ಯಾ ಅತಿಕ್ರಮಣ ನಡೆಸಿದ ಸುದ್ದಿ ಸ್ಫೋಟವಾಗುತ್ತಿದ್ದಂತೆ, ಉಕ್ರೇನ್‍ನಲ್ಲಿರುವ ಅಪಾರ ಸಂಖ್ಯೆಯ ಶ್ರೀಮಠದ ಶಿಷ್ಯರು, ಕನ್ನಡಿಗ ಹಾಗೂ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತರುವ ಉದ್ದೇಶದಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಶ್ರೀಮಠದ ಸೇವಾಖಂಡದ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದ್ದರು.
Advertisement
Advertisement
ಶ್ರೀಮಠದ ಶಿಷ್ಯ-ಭಕ್ತರಲ್ಲದ ಸಾವಿರಾರು ವಿದ್ಯಾರ್ಥಿಗಳು ಕೂಡಾ ಸಹಾಯವಾಣಿಯ ನೆರವು ಪಡೆದಿರುವುದು ಹೆಮ್ಮೆಯ ಸಂಗತಿ. ಯುದ್ಧಪೀಡಿತ ದೇಶದಿಂದ ಪ್ರತಿಯೊಬ್ಬ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನೆಲಕ್ಕೆ ವಾಪಾಸು ಕರೆತರುವವರೆಗೂ ಸರ್ಕಾರದ ಪ್ರಯತ್ನಕ್ಕೆ ಶ್ರೀಮಠ ಕೈಜೋಡಿಸುತ್ತದೆ ಎಂದು ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement