ಶ್ರೀರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕು ಮತ್ತು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಪೀಠದಿಂದ ಕೆಳಗಿಳಿಯಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ರಾಜ್ಯ ಹೈಕೋರ್ಟ್ ಗುರುವಾರ ವಜಾ ಮಾಡಿದೆ.
ಈ ಅರ್ಜಿ ಸಮರ್ಥನೀಯವಲ್ಲ ಎಂದು ಅಭಿಪ್ರಾಯಪಟ್ಟ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಎಸ್.ವಿಶ್ವಜೀತ್ ಶೆಟ್ಟಿ ಅವರಿದ್ದ ವಿಭಾಗೀಯ ಪೀಠ ಅರ್ಜಿಯನ್ನು ವಜಾ ಮಾಡಿದೆ. ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಪೀಠದಿಂದ ಇಳಿಯಲು ಆದೇಶ ನೀಡಬೇಕು, ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕು, ಕರ್ನಾಟಕದ ಎಲ್ಲಾ ಮಠಗಳ ಆಡಳಿತ ನಿಯಂತ್ರಕ್ಕೆ ಒಂದು ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಮಠದಲ್ಲಿ ಸಾಕಷ್ಟು ಆರ್ಥಿಕ ಅವ್ಯವಹಾರ ನಡೆಯುತ್ತಿದೆ ಎಂದು ಅರ್ಜಿದಾರರು ದೂರಿದ್ದರೂ, ಯಾವುದೇ ದಾಖಲಾತಿಗಳನ್ನು ನೀಡಿರಲಿಲ್ಲ.
ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಯಾವುದೇ ಕಾರಣಕ್ಕೂ ನ್ಯಾಯಾಲಯದಲ್ಲಿ ಪರಿಗಣಿಸಲ್ಪಡ ತಕ್ಕದ್ದಲ್ಲ ಎಂದು ಮಠದ ಕಡೆಯಿಂದ ಆಕ್ಷೇಪಣೆ ಸಲ್ಲಿಸಲಾಗಿತ್ತು. ಜೊತೆಗೆ ನ್ಯಾಯಾಲಯವು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಅರ್ಜಿದಾರರು ಮನವಿ ಸಲ್ಲಿಸಿದರೆ ಅದನ್ನು ಕಾನೂನಾತ್ಮಕವಾಗಿ ಪರಿಗಣಿಸುವಂತೆ ಮಾಡಿದ್ದ ಕೋರಿಕೆಯ ಆದೇಶವನ್ನು ಹಿಂಪಡೆಯುವಂತೆಯೂ ಅರ್ಜಿಯನ್ನು ಸಲ್ಲಿಸಲಾಗಿತ್ತು. 2016 ರಲ್ಲಿ ಸಲ್ಲಿಸಿದ್ದ ಈ ಅರ್ಜಿಯನ್ನು ರಾಜ್ಯ ಹೈಕೋರ್ಟ್ 2019 ರಲ್ಲಿ ತಿರಸ್ಕರಿಸಿ ಆದೇಶಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಮಠ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇದನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್, ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಮರ್ಥನೀಯತೆಯನ್ನು ಪರಿಶೀಲಿಸುವಂತೆ ಮತ್ತೆ ಹೈಕೋರ್ಟ್‍ಗೆ ಸೂಚನೆ ನೀಡಿತ್ತು.
ಅರ್ಜಿದಾರರ ಹಾಗೂ ಶ್ರೀಮಠದ ವಾದವನ್ನು ಆಲಿಸಿದ ನ್ಯಾಯಪೀಠ, ಅರ್ಜಿ ಸಮರ್ಥನೀಯವಲ್ಲ ಎಂಬ ಶ್ರೀಮಠದ ವಾದವನ್ನು ಎತ್ತಿಹಿಡಿದು ಅರ್ಜಿ ವಜಾಗೊಳಿಸಿತು. ಹಿರಿಯ ವಕೀಲ ಮನಮೋಹನ್ ಅವರು ಶ್ರೀಮಠದ ಪರ ವಾದ ಮಂಡಿಸಿದ್ದರು.
ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ರೈತರ ನೋಂದಣಿ ಕಾರ್ಯವನ್ನು ಶೀಘ್ರವೇ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೇ 30 ರಿಂದ ಡಿಸೆಂಬರ್ 3 ರವರೆಗೆ ಸಾಧಾರಣ…
ಬೆಂಗಳೂರಲ್ಲಿ ಕಳೆದ ಒಂದು ವಾರದಿಂದ ಮೈಕೊರೆವ ಚಳಿ ಶುರುವಾಗಿದೆ. ಮತ್ತೊಂದೆಡೆ ಚಂಡ ಮಾರುತದ…
29.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
ಡಿಎಪಿ ರಸಗೊಬ್ಬರಗಳ ತ್ವರಿತ ಪೂರೈಕೆ ಹಾಗೂ ಲಭ್ಯತೆಯ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು…
ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ, ಚಿಕ್ಕೋಡಿ ಹುಕ್ಕೇರಿ ಹಾಗೂ ಬಾಗಲಕೋಟ ಜಿಲ್ಲೆಯ…