ಉಕ್ರೇನ್ ಸಂತ್ರಸ್ತ ವಿದ್ಯಾರ್ಥಿಗಳಿಗೆ ರಾಮಚಂದ್ರಾಪುರ ಮಠ ಸಹಾಯಹಸ್ತ

March 7, 2022
8:36 PM

ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರಲು ಭಾರತ ಸರ್ಕಾರ ಆರಂಭಿಸಿದ ‘ಆಪರೇಷನ್ ಗಂಗಾ’ ಕಾರ್ಯಾಚರಣೆಗೆ ಶ್ರೀರಾಮಚಂದ್ರಾಪುರ ಮಠ ಟ್ವಿಟ್ಟರ್‍ನಲ್ಲಿ ಸಹಾಯವಾಣಿ ಆರಂಭಿಸುವ ಮೂಲಕ ನೆರವು ನೀಡಿರುವುದು ಸಂತ್ರಸ್ತ ವಿದ್ಯಾರ್ಥಿಗಳ ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾಗಿದೆ.

Advertisement
Advertisement

ಉಕ್ರೇನ್ ಮೇಲೆ ಫೆ.24ರಂದು ರಷ್ಯಾ ಅತಿಕ್ರಮಣ ನಡೆಸಿದ ಸುದ್ದಿ ಸ್ಫೋಟವಾಗುತ್ತಿದ್ದಂತೆ, ಉಕ್ರೇನ್‍ನಲ್ಲಿರುವ ಅಪಾರ ಸಂಖ್ಯೆಯ ಶ್ರೀಮಠದ ಶಿಷ್ಯರು, ಕನ್ನಡಿಗ ಹಾಗೂ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತರುವ ಉದ್ದೇಶದಿಂದ  ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಶ್ರೀಮಠದ ಸೇವಾಖಂಡದ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದ್ದರು.

Advertisement
ಶ್ರೀಮಠದ ಸೇವಾತಂಡದ ಶ್ರೀ ಸಂಯೋಜಕಿ ವಿದ್ಯಾ ಕೈಲಂಕಜೆ ಮತ್ತು ದಿಶಾದರ್ಶಿಯ ಬಾಲಸುಬ್ರಹ್ಮಣ್ಯ ಭಟ್ ನೇತೃತ್ವದ ತಂಡ ಮೊದಲು ಭಾರತ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಮಾಹಿತಿಗಳ ವಿನಿಮಯಕ್ಕೆ ಕ್ರಮ ಕೈಗೊಂಡಿತು. ಅಂತೆಯೇ ಸಂಘರ್ಷಪೀಡಿತ ದೇಶದ ರಾಯಭಾರ ಕಚೇರಿಗಳನ್ನು ಸಂಪರ್ಕಿಸಿತು. ಸಂತ್ರಸ್ತರ ನೆರವಿಗಾಗಿ ಫೆ.28ರಂದು ಶ್ರೀ ರಾಮಚಂದ್ರಾಪುರ ಮಠ ಟ್ವಿಟ್ಟರ್‍ನಲ್ಲಿ ಒಂದು ಸಂಪರ್ಕ್ ಸೇತು ಅಥವಾ ಹೆಲ್ಪ್ ಲೈನ್ ಆರಂಭಿಸಲಾಗಿದ್ದು, ಇದಕ್ಕೆ ನಿರೀಕ್ಷೆಗೂ ಮೀರಿ ಸ್ಪಂದನೆ ದೊರಕಿದೆ.

ಶ್ರೀಮಠದ ದಾಖಲೆಗಳಲ್ಲಿ ಲಭ್ಯವಿದ್ದ ಮಾಹಿತಿ ಆಧರಿಸಿ, ಉಕ್ರೇನ್‍ನಲ್ಲಿ ಸಿಲುಕಿದ ಭಾರತೀಯ ವಿದ್ಯಾರ್ಥಿಗಳ ಹೆಸರು ಹಾಗೂ ವಿವರಗಳನ್ನು ಸಂಗ್ರಹಿಸಿ ಭಾರತದ ರಾಯಭಾರ ಕಚೇರಿಗೆ ಹಾಗೂ ಭಾರತ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಸಲ್ಲಿಸಿ, ಅತಂತ್ರ ಸ್ಥಿತಿಯಲ್ಲಿರುವವರನ್ನು ತಕ್ಷಣ ಸುರಕ್ಷಿತವಾಗಿ ತಾಯ್ನೆಲಕ್ಕೆ ತರುವಂತೆ ಮನವಿ ಮಾಡಿಕೊಂಡಿತು. ಬಳಿಕ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಹಾಗೂ ಆ ವಿದ್ಯಾರ್ಥಿಗಳ ಮೂಲಕ ಇತರ ವಿದ್ಯಾರ್ಥಿಗಳನ್ನು ಸಂಪರ್ಕಿಸಲಾಗಿದೆ. ಉಕ್ರೇನ್‍ನ ಶೋಚಿನ್‍ನಲ್ಲಿ ಸಿಲುಕಿದ್ದ ಕರ್ನಾಟಕದ ವಿದ್ಯಾರ್ಥಿಗಳು ಸೇರಿದಂತೆ 1400ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಪೋಲೆಂಡ್‍ಗೆ ಸ್ಥಳಾಂತರಿಸುವಲ್ಲಿ ರಾಯಭಾರ ಕಚೇರಿ ಯಶಸ್ವಿಯಾಗಿದ್ದು, ಇಡೀ ತಂಡ ಶ್ರೀಮಠದ ಸಂಪರ್ಕಸೇತುವಿನ ಮೂಲಕ ಒಗ್ಗೂಡಲು ಸಾಧ್ಯವಾಗಿದೆ. ವಿದ್ಯಾರ್ಥಿಗಳ ಸಂಪರ್ಕ ಸಾಧಿಸುವಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಮುರಳೀಧರನ್ ಮತ್ತು ಸಂಬಂಧಪಟ್ಟ ಅಧಿಕಾರಿಗಳು, ರೆಸ್ಕ್ಯೂ ಆಪರೇಷನ್ ಗಂಗಾ ನಿಯಂತ್ರಣ ಕೊಠಡಿ ಕಾರ್ಯಕರ್ತರು ಶ್ರೀಮಠದ ಕಾರ್ಯಕರ್ತರ ಜತೆ ನಿರಂತರ ಸಂಪರ್ಕದಲ್ಲಿದ್ದರು.

Advertisement
ಖಾರ್ಕಿವ್‍ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ ಒಂದು ಹಂತವಾದರೆ, ಶೋಮಿಯಲ್ಲಿ ಸಿಲುಕಿರುವ ಸುಮಾರು 1200 ವಿದ್ಯಾರ್ಥಿಗಳ ತಂಡವನ್ನು ರಕ್ಷಿಸುವಲ್ಲಿ ಕೂಡಾ ಶ್ರೀಮಠದ ಸಂಪರ್ಕಸೇತು ನೆರವಾಗುತ್ತಿದೆ. ಸಂಪೂರ್ಣ ಬ್ಲಾಕೌಟ್ ಇರುವ ಈ ಪ್ರದೇಶದಲ್ಲಿ ವಿದ್ಯುತ್, ಆಹಾರ ಮತ್ತು ಕುಡಿಯುವ ನೀರಿಗೂ ಹಾಹಾಕಾರ ಎಂಬ ಸ್ಥಿತಿ ಇದ್ದು, ಇವರ ಸಮನ್ವಯಕ್ಕೆ ಕೂಡಾ ಇಡೀ ತಂಡ ಟೊಂಕ ಕಟ್ಟಿದೆ.

ಶ್ರೀಮಠದ ಶಿಷ್ಯ-ಭಕ್ತರಲ್ಲದ ಸಾವಿರಾರು ವಿದ್ಯಾರ್ಥಿಗಳು ಕೂಡಾ ಸಹಾಯವಾಣಿಯ ನೆರವು ಪಡೆದಿರುವುದು ಹೆಮ್ಮೆಯ ಸಂಗತಿ. ಯುದ್ಧಪೀಡಿತ ದೇಶದಿಂದ ಪ್ರತಿಯೊಬ್ಬ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನೆಲಕ್ಕೆ ವಾಪಾಸು ಕರೆತರುವವರೆಗೂ ಸರ್ಕಾರದ ಪ್ರಯತ್ನಕ್ಕೆ ಶ್ರೀಮಠ ಕೈಜೋಡಿಸುತ್ತದೆ ಎಂದು ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ : ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ : ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ
April 25, 2024
3:00 PM
by: The Rural Mirror ಸುದ್ದಿಜಾಲ
ಬರಗಾಲ ಎಫೆಕ್ಟ್‌ : ಗಗನಕ್ಕೇರಿದ ತರಕಾರಿ ದರ : ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ ಯಾವುದೂ ಮುಟ್ಟುವಂಗಿಲ್ಲ..
April 25, 2024
2:39 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror