ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಂಸದ ಡಿಕೆ ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಕಿತ್ತಾಟವಾದ್ದು ಏಕೆ ?

January 3, 2022
9:35 PM

ರಾಮನಗರ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ನಾಡಪ್ರಭು ಕೆಂಪೇಗೌಡ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ನಡೆದಿತ್ತು. ಈ ಸಮಯದಲ್ಲಿ ವೇದಿಕೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಂಸದ ಡಿ.ಕೆ ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ  ಕಿತ್ತಾಟ ನಡೆಸಿದ ಪ್ರಸಂಗ ನಡೆದಿದೆ.

Advertisement

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ. ಸಿ.ಎನ್ ಅಶ್ವತ್ಥ ನಾರಾಯಣ, ನೀರಾವರಿ ಯೋಜನೆಗಳ ಅನುಪ್ಠಾನ ಬಿಜೆಪಿ ಸರ್ಕಾರದಿಂದಲೇ ಸಾಧ್ಯ. ತಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಿಲ್ಲೆಯಲ್ಲಿ ನೆರವೇರಿಸಿದೆ. ಇಲ್ಲಿ ಬಿಜೆಪಿ ಪ್ರತಿನಿಧಿ ಇಲ್ಲದಿದ್ರೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಲಿಲ್ಲ ಎನ್ನುತ್ತಾ ಪರೋಕ್ಷವಾಗಿ ಕಾಂಗ್ರೆಸ್‌ ಪಕ್ಷವನ್ನು ಛೇಡಿಸಿದರು.

ಇದಕ್ಕೆ  ಸಿಟ್ಟಾದ ಡಿ.ಕೆ ಸುರೇಶ್,  ಸಚಿವ ಅಶ್ವತ್ಥ ನಾರಾಯಣ ಅವರ ಮಾತಿಗೆ ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ವಿಧಾನಪರಿಷತ್ ಸದಸ್ಯ ಸಿ.ರವಿ ಅಶ್ವತ್ಥ ನಾರಾಯಣ ಅವರು ಮಾತನಾಡುವ ಮೈಕ್ ಕಿತ್ತುಕೊಂಡ ಘಟನೆಯೂ ನಡೆದಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |
April 30, 2025
1:54 PM
by: ಸಾಯಿಶೇಖರ್ ಕರಿಕಳ
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ
April 30, 2025
10:29 AM
by: The Rural Mirror ಸುದ್ದಿಜಾಲ
ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ
April 30, 2025
10:18 AM
by: The Rural Mirror ಸುದ್ದಿಜಾಲ
ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!
April 30, 2025
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group