ರಾಮನಗರ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ನಾಡಪ್ರಭು ಕೆಂಪೇಗೌಡ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ನಡೆದಿತ್ತು. ಈ ಸಮಯದಲ್ಲಿ ವೇದಿಕೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಂಸದ ಡಿ.ಕೆ ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಕಿತ್ತಾಟ ನಡೆಸಿದ ಪ್ರಸಂಗ ನಡೆದಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ. ಸಿ.ಎನ್ ಅಶ್ವತ್ಥ ನಾರಾಯಣ, ನೀರಾವರಿ ಯೋಜನೆಗಳ ಅನುಪ್ಠಾನ ಬಿಜೆಪಿ ಸರ್ಕಾರದಿಂದಲೇ ಸಾಧ್ಯ. ತಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಿಲ್ಲೆಯಲ್ಲಿ ನೆರವೇರಿಸಿದೆ. ಇಲ್ಲಿ ಬಿಜೆಪಿ ಪ್ರತಿನಿಧಿ ಇಲ್ಲದಿದ್ರೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಲಿಲ್ಲ ಎನ್ನುತ್ತಾ ಪರೋಕ್ಷವಾಗಿ ಕಾಂಗ್ರೆಸ್ ಪಕ್ಷವನ್ನು ಛೇಡಿಸಿದರು.
ಇದಕ್ಕೆ ಸಿಟ್ಟಾದ ಡಿ.ಕೆ ಸುರೇಶ್, ಸಚಿವ ಅಶ್ವತ್ಥ ನಾರಾಯಣ ಅವರ ಮಾತಿಗೆ ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ವಿಧಾನಪರಿಷತ್ ಸದಸ್ಯ ಸಿ.ರವಿ ಅಶ್ವತ್ಥ ನಾರಾಯಣ ಅವರು ಮಾತನಾಡುವ ಮೈಕ್ ಕಿತ್ತುಕೊಂಡ ಘಟನೆಯೂ ನಡೆದಿದೆ.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…