ಮಧ್ಯಪ್ರದೇಶದ ಬರ್ವಾನಿ ಮತ್ತು ಸೆಂಧ್ವಾದಲ್ಲಿ ರಾಮನವಮಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದ್ದು, ಈ ವೇಳೆ ಯುವತಿಯೊಬ್ಬಳು ಮೇಲ್ಛಾವಣಿಯ ಮೇಲೆ ನಿಂತು ಕಲ್ಲು ಎಸೆಯುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ಆಧಾರದಲ್ಲಿ ಇದೀಗ 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ವೀಡಿಯೋ ಆಧರಿಸಿ ಪೊಲೀಸರು ಆ ಪ್ರದೇಶದಲ್ಲಿದ್ದ 3 ಮನೆಗಳ ಮೇಲೆ ಕ್ರಮ ಕೈಗೊಂಡು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿದ್ದು, ಎಲ್ಲೆಲ್ಲಿ ಕಲ್ಲುಗಳನ್ನು ಎಸೆಯಲಾಗಿದೆಯೋ ಆ ಮನೆಗಳನ್ನು ಕೆಡವಲಾಗುತ್ತದೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಒಟ್ಟು 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, 25 ರಿಂದ 30 ಮಂದಿಯನ್ನು ಗುರುತಿಸಲಾಗಿದ್ದು, ಅವರಲ್ಲಿ 12 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel