500 ವರ್ಷದ ಬಳಿಕ ಅಯೋಧ್ಯೆಯಲ್ಲಿ ರಾಮನವಮಿ | ಬಾಲ ರಾಮನನ್ನು ಸ್ಪರ್ಶಿಸಿದ ಸೂರ್ಯ ತಿಲಕ | ರಾಮನನ್ನು ನೋಡಲು ಬರುತ್ತಿದೆ ಭಕ್ತರ ದಂಡು |

April 17, 2024
2:45 PM

ಅದು 5 ದಶಕಗಳ ಕನಸು. ಈಗ ಈಡೇರಿದೆ. ಶ್ರೀ ರಾಮನನ್ನು(Lord Rama) ಅಯೋಧ್ಯೆಯಲ್ಲಿ(Ayodhya) ಮತ್ತೆ ಮರು ಸ್ಥಾಪನೆ ಮಾಡಬೇಕು ಅನ್ನುವುದು ರಾಮ ಭಕ್ತರ, ದೇಶದ  ಕೋಟ್ಯಾಂತರ ಹಿಂದೂಗಳ ಕನಸಾಗಿತ್ತು. ಇದಾಗಿ 500 ವರ್ಷದ ಬಳಿಕ ಶ್ರೀರಾಮನ ಹುಟ್ಟಿದ ಸ್ಥಳ ಅಯೋಧ್ಯೆಯಲ್ಲಿ ರಾಮನವಮಿಯಂದು (Rama Navami) ಬಾಲರಾಮನಿಗೆ ಸೂರ್ಯ ಅಭಿಷೇಕ (Surya Tilak)ನಡೆಯಿತು.

ಶ್ರೀರಾಮನ ಜನ್ಮ ಮುಹೂರ್ತದ ವೇಳೆಯಲ್ಲೇ ಮಧ್ಯಾಹ್ನ 12 ಗಂಟೆಯ  ನಂತರ ಸೂರ್ಯ ರಶ್ಮಿ ರಾಮ ಲಲ್ಲಾನ ವಿಗ್ರಹದ ಹಣೆಯನ್ನು ಸ್ಪರ್ಶಿಸಿತು. ರಾಮ ಮಂದಿರದಲ್ಲಿ (Ram Mandir) ಸೂಕ್ತ ಸ್ಥಳಗಳಲ್ಲಿ ಅಳವಡಿಸಿರುವ ಮಸೂರಗಳು ಸೂರ್ಯನ ಕಿರಣವನ್ನು ರಾಮ ಲಲ್ಲಾ ಮೂರ್ತಿಯ ಹಣೆಯನ್ನು ಸ್ಪರ್ಶಿಸಿತು. ಯಾವುದೇ ಬ್ಯಾಟರಿ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಕೆ ಮಾಡದೇ ಸೂರ್ಯನ ಕಿರಣಗಳು ನೇರವಾಗಿ ಬಾಲ ರಾಮನ ಹಣೆಯನ್ನು ಸ್ಪರ್ಶಿಸುವಂತೆ ಮಾಡಲು ಮಸೂರಗಳನ್ನು ಮಾತ್ರ ಬಳಕೆ ಮಾಡಲಾಗಿತ್ತು.

ಬಾಲಕ ರಾಮ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಮೊದಲ ರಾಮನವಮಿ ನಡೆಯುತ್ತಿದ್ದು, ಅಯೋಧ್ಯೆಯಲ್ಲಿ ಸಡಗರ ಕಳೆಗಟ್ಟಿದೆ. ಮುಂಜಾನೆಯೇ ಬೆಳಗಿನ ಜಾವ 3.30ಕ್ಕೆ ಮಂಗಳಾರತಿ ನೆರವೇರಿಸುವುದರ ಮೂಲಕ ಗರ್ಭಗುಡಿ ಬಾಗಿಲು ತೆರೆಯಲಾಗಿದೆ. ರಾತ್ರಿ 11 ರ ತನಕವೂ ಭಕ್ತರಿಗೆ ರಾಮನ ದರ್ಶನ ಸಿಗಲಿದೆ. ಇಂದು ಬರೋಬ್ಬರಿ 19 ಗಂಟೆಗಳ ಕಾಲ ರಾಮ ಮಂದಿರ ಓಪನ್ ಇರಲಿದೆ.

ಮಂದಿರ ಉದ್ಘಾಟನೆಯಾದ ಬಳಿಕ ಆಚರಿಸುತ್ತಿರುವ ಮೊದಲ ರಾಮನವಮಿ ಆಗಿರುವ ಕಾರಣದಿಂದ ಹೆಚ್ಚಿನ ಸಂಖ್ಯೆ ರಾಮಭಕ್ತರು ಸೇರುವ ನಿರೀಕ್ಷೆಯಿದೆ. ರಾಮನವಮಿ ಸಂಭ್ರಮದಲ್ಲಿ ಅಯೋಧ್ಯೆಗೆ 40 ಲಕ್ಷ ಜನ ಭಕ್ತರು ಬರುವ ನಿರೀಕ್ಷೆಯಿದೆ. ಗಣ್ಯ ಅತಿಥಿಗಳು ಏ.19 ರ ತನಕ ರಾಮದರ್ಶನ ಮುಂದೂಡಿ ಎಂದಿರುವ ರಾಮಜನ್ಮ ಭೂಮಿ ಟ್ರಸ್ಟ್ ಈ 19 ರ ತನಕ ಬುಕ್ಕಿಂಗ್ ರದ್ದು ಮಾಡಿದ್ದು, ಎಲ್ಲರೂ ಸರತಿ ಸಾಲಿನಲ್ಲಿಯೇ ನಿಂತು ದರ್ಶನ ಪಡೆಯುವಂತೆ ಹೇಳಿದೆ. ಬಾಲಕರಾಮನ ಪೂಜೆ ಕೈಂಕರ್ಯಗಳು ನೇರ ಪ್ರಸಾರಗೊಳ್ಳುತ್ತಿದ್ದು, ಅಯೋಧ್ಯೆಯಾದ್ಯಂತ 100 ಎಲ್ಇಡಿ ಪರದೆಯ ವ್ಯವಸ್ಥೆಯನ್ನು ಮಾಡಲಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror