ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ಚಾಲನೆ ನೀಡಿದ್ದಾರೆ.
ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು, - ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ - ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ. - ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ. - ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ಗೆ ನಿರ್ದೇಶಕರಾಗಿ ಶ್ರೀ ಮಲ್ಲಿಕಾರ್ಜುನ ಕಡಕೋಳ. - ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡ ಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು. ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
– ಅಂತರ್ಜಾಲ ಮಾಹಿತಿ
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…