Advertisement
ಸುದ್ದಿಗಳು

ಡಾ.ಶ್ರೀಧರ ಎಚ್ ಜಿ ಅವರ ‘ರಸದಾಳಿ’ ಸಂಶೋಧನಾ ಕೃತಿ ಬಿಡುಗಡೆ

Share

ಹಳೆಗನ್ನಡ ಮತ್ತು ನಡುಗನ್ನಡ ಸಾಹಿತ್ಯದ ಅಭ್ಯಾಸಕ್ಕೆ ಪಾಂಡಿತ್ಯದ ನೆರವು ಅಗತ್ಯವಾಗಿ ಬೇಕಾಗುತ್ತದೆ. ಅಂತಹ ಪಾಂಡಿತ್ಯದೊಂದಿಗೆ ವಿಪುಲವಾದ ಆಕರಗಳನ್ನು ಬಳಸಿಕೊಂಡು ರಸದಾಳಿ ಕೃತಿ ರೂಪುಗೊಂಡಿದೆ. ಈ ಕೃತಿಯಲ್ಲಿನ ಪ್ರತಿಯೊಂದು ಲೇಖನದಲ್ಲಿಯೂ ಸೂಕ್ಷ್ಮ ಸಂವೇದನೆ ಗಮನಕ್ಕೆ ಬರುತ್ತದೆ ಎಂದು ಮುಂಬೈ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಡಾ.ತಾಳ್ತಜೆ ವಸಂತ ಕುಮಾರ್ ಹೇಳಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ.ಶ್ರೀಧರ ಎಚ್.ಜಿ ರಚಿಸಿರುವ ‘ರಸದಾಳಿ’ ಎಂಬ ಸಂಶೋಧನಾ ಕೃತಿಯನ್ನು ಟೌನ್ ಬ್ಯಾಂಕ್ ಹಾಲ್ ನಲ್ಲಿ ಬಿಡುಗಡೆಗೊಳಿಸಿ ಭಾನುವಾರ ಮಾತನಾಡಿದರು.

ರಸದಾಳಿ ಎನ್ನುವ ಪದವೂ ರಸದಾಳಿ ಕಬ್ಬಿನಂತೆ ಸೊಗಸಾಗಿದೆ. ಈ ಕೃತಿಯಲ್ಲಿರುವ ಲೇಖನಗಳು ಸಾಹಿತ್ಯಿಕ ಮಹತ್ವವನ್ನು ಒಳಗೊಂಡಿವೆ. ವೈರಾಗ್ಯ ವಿಜಯದ ಪರಾಕಾಷ್ಟೆ ಮತ್ತು ಸೌಂದರ್ಯದ ಪರಾಕಾಷ್ಟೆಯಲ್ಲೂ ಉಂಟಾಗುತ್ತದೆ ಎನ್ನುವುದನ್ನು ಕೃತಿಯಲ್ಲಿ ಸುಂದರವಾಗಿ ಚಿತ್ರಿಸುವಲ್ಲಿ ಲೇಖಕ ಯಶಸ್ವಿಯಾಗಿದ್ದಾರೆ. ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಕ್ರೀಡೆಯ ವೈವಿಧ್ಯಗಳ ಬಗ್ಗೆ ತಿಳಿಸುವುದರಲ್ಲಿ ಶ್ರೀಧರ್ ಅವರ ಶ್ರಮ ಮೆಚ್ಚುವಂತದ್ದು. ರಸದಾಳಿ ಎಂಬ ಕಬ್ಬಿನ ಕುರಿತು ಕನ್ನಡ ಸಾಹಿತ್ಯದಲ್ಲಿ ಕಡಿಮೆ ಕೆಲಸವಾದ ವಿಷಯದ ಕುರಿತು ತಿಳಿಸುವ ಲೇಖಕರ ಪ್ರಯತ್ನ ಗಮನಾರ್ಹ. ಈ ಪುಸ್ತಕದಲ್ಲಿರುವ ಎಲ್ಲಾ ಲೇಖನಗಳು ಸ್ವಾರಸ್ಯಕರವಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕೃತಿಕಾರ ಡಾ.ಶ್ರೀಧರ್ ಎಚ್.ಜಿ ಮಾತನಾಡಿ ತಾಳ್ಮೆ, ವಿವೇಚನೆ ಮತ್ತು ಪರಿಶ್ರಮವಿದ್ದರೆ ಸಂಶೋಧನಾ ಲೇಖನಗಳನ್ನು ಬರೆಯುವುದಕ್ಕೆ ಸಾಧ್ಯ. ಅಗಾಧವಾದ ಸಾಹಿತ್ಯ ಸಂಪತ್ತು ನಮ್ಮಲ್ಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಪ್ರಾಚಾರ್ಯ ಪ್ರೊ.ಎ.ವಿ ನಾರಾಯಣ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶೇಷ ಪ್ರತಿಭೆ ನೇಹಾ ರೈ ಅವರನ್ನು ಅಭಿನಂದಿಸಲಾಯಿತು. ಬೆಳ್ಳಿಪ್ಪಾಡಿಯ ನಿವೃತ್ತ ಶಿಕ್ಷಣ ಸಂಯೋಜಕ ಪದ್ಮನಾಭ ಆಳ್ವ.ಕೆ ಕನ್ನಡ ಮಾಧ್ಯಮದಲ್ಲಿ ಹತ್ತನೇ ತರಗತಿಯಲ್ಲಿ ತಾಲೂಕಿನ ಇಬ್ಬರು ಸಾಧಕ ವಿದ್ಯಾರ್ಥಿಗಳಾದ ಸನತ್ ಕುಮಾರ್ ಮತ್ತು ಆಯಿಷತ್ ಶಮಾ ಇವರಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಿದರು. ಸಾಹಿತ್ಯ ಸಿಂಚನ – ಪುಸ್ತಕ ಹಬ್ಬದ ರುವಾರಿ ಪ್ರಕಾಶ್ ಕೊಡಂಕಿರಿ ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕದ ಅಧ್ಯಕ್ಷ ಐತ್ತಪ್ಪ ನಾಯಕ್ ಸ್ವಾಗತಿಸಿ, ಪ್ರೊ.ಹರಿನಾರಾಯಣ ಮಾಡಾವು ವಂದಿಸಿದರು. ವಿವೇಕಾನಂದ ಬಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಶೋಭಿತಾ ಸತೀಶ್ ಕಾರ್ಯಕ್ರವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

2 hours ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

3 hours ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

3 hours ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

3 hours ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

18 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

18 hours ago