ಎಂ. ಕಾಮ್ ಪದವೀಧರೆಯಾಗಿ ಇನ್ಫೋಸಿಸ್ ಸಂಸ್ಥೆಯಲ್ಲಿ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಶ್ಮಿ ಸನಿಲ್ ಅವರು ಸಾಹಿತ್ಯ ಕ್ಷೇತ್ರದಲ್ಲೂ ಎತ್ತಿದ ಕೈ. ಕನ್ನಡ ತುಳು ಭಾಷೆಯಲ್ಲಿ ಹಿಡಿತವನ್ನು ಹೊಂದಿದ್ದು, ನೂರಾರು ಕವನ ರಚಿಸಿ 70 ಕ್ಕೂ ಹೆಚ್ಚು ಅಂತರ್ಜಾಲ ಹಾಗೂ ನೇರ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಪ್ರೌಢಿಮೆ ತೋರಿರುವ ಇವರು ತನ್ನ ಕವನಗಳಿಗಾಗಿ 300 ಕ್ಕೂ ಅಧಿಕ ಬಹುಮಾನ ಪಡೆದುಕೊಂಡವರು. ಇದೀಗ “ಚಂದನ ಸಾಹಿತ್ಯ ಜ್ಯೋತಿ” ಎಂಬ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಲಾಯಿತು.
ರಶ್ಮಿ ಸನಿಲ್ ಇವರು ಮೂಲತಃ ಮಂಗಳೂರಿನ ಕೊಲ್ಯ ಸೋಮೇಶ್ವರದಲ್ಲಿ ಹುಟ್ಟಿ ಬೆಳೆದವರು. ದಿವಂಗತ ಕೃಷ್ಣ ಕೊಟ್ಯಾನ್ ಹಾಗೂ ನವೀನ ಕುಮಾರಿ ಇವರ ಸುಪುತ್ರಿ. ಮಂಗಳೂರಿನ ಖ್ಯಾತ ಕ್ರಿಕೆಟ್ ಆಟಗಾರ ನಿತೇಶ್ ಕೋಟ್ಯಾನ್ ಇವರ ಪತ್ನಿ.
ಎಂ. ಕಾಮ್ ಪದವೀಧರೆಯಾಗಿ ಇನ್ಫೋಸಿಸ್ ಸಂಸ್ಥೆಯಲ್ಲಿ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಶ್ಮಿ ಸನಿಲ್ ಅವರು, ಕನ್ನಡ ತುಳು ಭಾಷೆಯಲ್ಲಿ ಹಿಡಿತವನ್ನು ಹೊಂದಿದ್ದು, ನೂರಾರು ಕವನ ರಚಿಸಿ ಮನೆ ಮಾತಾದವರು. 70 ಕ್ಕೂ ಹೆಚ್ಚು ಅಂತರ್ಜಾಲ ಹಾಗೂ ನೇರ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಪ್ರೌಢಿಮೆ ತೋರಿರುವ ಇವರು ತನ್ನ ಕವನಗಳಿಗಾಗಿ 300 ಕ್ಕೂ ಅಧಿಕ ಬಹುಮಾನ ಪಡೆದುಕೊಂಡವರು. ಲೇಖಕಿಯಾಗಿ, ಬರಹಗಾರ್ತಿಯಾಗಿ, ನೃತ್ಯಪಟುವಾಗಿ, ನಿರೂಪಕಿಯಾಗಿಯೂ ಗುರುತಿಸಿಕೊಂಡವರು. ಶ್ರೀ ಸಿದ್ದೇಶ್ವರ ಸಾಹಿತ್ಯ ವೇದಿಕೆ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಕೂಡ ಆಗಿರುವರು. ಯುವವಾಹಿನಿ, ರೋಟರಿ, ಮಹಿಳಾ ಮಂಡಳಿ, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್, ಕಥಾಬಿಂದು ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ, ಪುತ್ತೂರು ಸಾಹಿತ್ಯ ವೇದಿಕೆ, ಚಂದನ ಸಾಹಿತ್ಯ ವೇದಿಕೆ, ನವಚೇತನ ಸೇವಾ ಬಳಗ (ರಿ). ತೋಡಾರು ಮೊದಲಾದ ಪ್ರತಿಷ್ಠಿತ ಸಂಸ್ಥೆಗಳ ಸದಸ್ಯೆ ಕೂಡ ಆಗಿದ್ದಾರೆ.
ಇವರ ಈ ಗಣನೀಯ ಸೇವೆಯನ್ನು ಗುರುತಿಸಿ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಭೀಮರಾವ್ ವಾಷ್ಟರ್ , ನಾರಾಯಣ ಕುಕ್ಕುವಳ್ಳಿ , ವೈಲೇಶ್ ಪಿ. ಕೊಡಗು, ಹಾಜಿ ಅಬೂಬಕ್ಕರ್ ಮೊದಲಾದ ಗಣ್ಯರ ಸಮ್ಮುಖದಲ್ಲಿ ” ಚಂದನ ಸಾಹಿತ್ಯ ಜ್ಯೋತಿ “ ಎಂಬ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಲಾಯಿತು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "“ಚಂದನ ಸಾಹಿತ್ಯ ಜ್ಯೋತಿ” ಪ್ರಶಸ್ತಿ ಪಡೆದ ಇನ್ಫೋಸಿಸ್ ಸಂಸ್ಥೆಯ ಉದ್ಯೋಗಿ ರಶ್ಮಿ ಸನಿಲ್ |"