ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ

January 15, 2025
6:47 AM

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ ಅಕ್ಕಿ ಖರೀದಿಗೆ ಸಮ್ಮತಿಸಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ ಪ್ರಮುಖ ಆಹಾರ ಪದಾರ್ಥಗಳಲ್ಲಿ ಅಕ್ಕಿಯೂ ಸೇರಿದೆ. ಕರ್ನಾಟಕ ಅಧಿಕ ಭತ್ತ ಬೆಳೆಯುವ ರಾಜ್ಯಗಳಲ್ಲಿ ಒಂದಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಉತ್ಪಾದಿಸುತ್ತಿದೆ. ಹಾಲಿ ರಾಜ್ಯದಲ್ಲಿ 48,91,000 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಉತ್ಪಾದನಾ ಸಾಮರ್ಥ್ಯವಿದ್ದು ಕೇಂದ್ರದಿಂದ ಬೆಂಬಲ ಬೆಳೆಯೊಂದಿಗೆ ಕೇವಲ 105000 ಲಕ್ಷ  ಮೆಟ್ರಿಕ್ ಟನ್ ಖರೀದಿಗೆ ಮಾತ್ರ ಅವಕಾಶ ನೀಡಲಾಗಿತ್ತು.ಈ ಹಿನ್ನೆಲೆ ಕೇಂದ್ರ ಸರ್ಕಾರ ಕೂಡಲೇ ಮದ್ಯ ಪ್ರವೇಶಿಸಿ 2024-25 ನೇ ಸಾಲಿನಲ್ಲಿ ಬೆಂಬಲ ಬೆಲೆಯೊಂದಿಗೆ ಕನಿಷ್ಠ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ನಿರ್ದೇಶನ ನೀಡುವಂತೆ ಕೃಷಿ ಸಚಿವರು ಕಳೆದ ಡಿಸೆಂಬರ್‌ನಲ್ಲಿ ಪತ್ರದ ಮುಖೇನ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವಾಲಯ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಸೂಕ್ತ ಕ್ರಮ ವಹಿಸುವಂತೆ ರಾಜ್ಯದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಇಲಾಖೆ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror