ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ ಅಕ್ಕಿ ಖರೀದಿಗೆ ಸಮ್ಮತಿಸಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ ಪ್ರಮುಖ ಆಹಾರ ಪದಾರ್ಥಗಳಲ್ಲಿ ಅಕ್ಕಿಯೂ ಸೇರಿದೆ. ಕರ್ನಾಟಕ ಅಧಿಕ ಭತ್ತ ಬೆಳೆಯುವ ರಾಜ್ಯಗಳಲ್ಲಿ ಒಂದಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಉತ್ಪಾದಿಸುತ್ತಿದೆ. ಹಾಲಿ ರಾಜ್ಯದಲ್ಲಿ 48,91,000 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಉತ್ಪಾದನಾ ಸಾಮರ್ಥ್ಯವಿದ್ದು ಕೇಂದ್ರದಿಂದ ಬೆಂಬಲ ಬೆಳೆಯೊಂದಿಗೆ ಕೇವಲ 105000 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಮಾತ್ರ ಅವಕಾಶ ನೀಡಲಾಗಿತ್ತು.ಈ ಹಿನ್ನೆಲೆ ಕೇಂದ್ರ ಸರ್ಕಾರ ಕೂಡಲೇ ಮದ್ಯ ಪ್ರವೇಶಿಸಿ 2024-25 ನೇ ಸಾಲಿನಲ್ಲಿ ಬೆಂಬಲ ಬೆಲೆಯೊಂದಿಗೆ ಕನಿಷ್ಠ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ನಿರ್ದೇಶನ ನೀಡುವಂತೆ ಕೃಷಿ ಸಚಿವರು ಕಳೆದ ಡಿಸೆಂಬರ್‌ನಲ್ಲಿ ಪತ್ರದ ಮುಖೇನ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವಾಲಯ 5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಸೂಕ್ತ ಕ್ರಮ ವಹಿಸುವಂತೆ ರಾಜ್ಯದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಇಲಾಖೆ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದೆ.
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ…
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ…
ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ…