ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

April 25, 2025
9:30 PM

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಮಾಡಲು ಕೊನೆಯ ಅವಕಾಶವಾಗಿರುತ್ತದೆ. ತದನಂತರ ಇ-ಕೆವೈಸಿ ಮಾಡದ  ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಲಾಗುತ್ತದೆ. ಕೆಲವು ಸದಸ್ಯರು ಒಟಿಪಿ  ಮೂಲಕ ತಿದ್ದುಪಡಿ ಮಾಡಿದ್ದು ಸದರಿ ಸದಸ್ಯರು ಜೀವಂತ ಇರುವ ಬಗ್ಗೆ ಜೀವಮಾಪನ ನೀಡಿ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿರುತ್ತದೆ.

ಪಡಿತರ ಚೀಟಿದಾರರು ತಮ್ಮ ಕುಟುಂಬದ  ಎಲ್ಲಾ ಸದಸ್ಯರ  ಇ-ಕೆವೈಸಿ ನೀಡಬೇಕಾಗಿದ್ದು, ಪಡಿತರ  ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್.ಪಿ.ಜಿ.ವಿವರ, ಮೊಬೈಲ್ ಸಂಖ್ಯೆ ತುರ್ತಾಗಿ ಸಂಗ್ರಹಿಸಬೇಕಾಗಿರುತ್ತದೆ.

ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಚಾಲ್ತಿ ಇರುವ  ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ನೀಡಲು ಆಧಾರ್ ಕಾರ್ಡ್, ಎಲ್.ಪಿ.ಜಿ ದಾಖಲೆ, ಜಾತಿ ಪ್ರಮಾಣ ಪತ್ರ(ಇದ್ದಲ್ಲಿ), ಆದಾಯ ಪ್ರಮಾಣ ಪತ್ರ, ಎಂಡೋಸಲ್ಫಾನ್ ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ಧೃಢಪತ್ರಗಳಿದ್ದಲ್ಲಿ ಅವುಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಲು ತಿಳಿಸಿದೆ. ಆದ್ಯತೆ ಮೇರೆಗೆ ಇ-ಕೆವೈಸಿ ಮಾಡದಿರುವ ಅಂತ್ಯೋದಯ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಲೇ ಬೇಕಾಗಿದ್ದು  ಇ-ಕೆವೈಸಿ  ನೀಡಲು ಯಾವುದೇ ಶುಲ್ಕವಿರುವುದಿಲ್ಲ.

ಇ-ಕೆವೈಸಿ ಆಗದ ಪಡಿತರ ಪಡೆಯುತ್ತಿರುವ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಇ-ಕೆವೈಸಿ ಡ್ರೈವ್ ನಲ್ಲಿ ಇ-ಕೆವೈಸಿ ಮಾಡಿಕೊಳ್ಳಬೇಕು. ಫಲಾನುಭವಿಗಳು ತಮ್ಮ ಇ-ಕೆವೈಸಿ ಸ್ಥಿತಿಯನ್ನು ನೋಡಿಕೊಳ್ಳಲು ಮತ್ತು ಸ್ಪಷ್ಟೀಕರಣಗಳನ್ನು ಪಡೆಯಲು ಇಲಾಖೆಯ ನಿಶುಲ್ಕ ಸಹಾಯವಾಣಿ -1967/14445/1800 425 9339 ಗೆ ಕರೆ ಮಾಡಬಹುದು.

ಹಾಸಿಗೆ ಹಿಡಿದವರು, ಅಂಗವಿಕಲರು, ವೃದ್ಧರು, ಕುಷ್ಠರೋಗಿಗಳು ಇ-ಕೆವೈಸಿ ಮಾಡಲು ಸಾಧ್ಯವಾಗದಿದ್ದರೆ ಆಹಾರ ನಿರೀಕ್ಷಕರಿಗೆ ಮಾಹಿತಿ ಒದಗಿಸಬೇಕು. ಇ-ಕೆವೈಸಿ ಫಲಾನುಭವಿಯು ಕರ್ನಾಟಕದ ಹೊರಗಿದ್ದರೆ, ಅವರ ವಾಸ್ತವ್ಯದ ಹತ್ತಿರ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ಎಪ್ರಿಲ್  30 ರ ಒಳಗೆ ಇ-ಕೆವೈಸಿ ಪೂರ್ಣಗೊಳಿಸಲು ಫಲಾನುಭವಿಗಳು ವಿಫಲರಾದ್ದಲ್ಲಿ, ಅಂತಹ ಫಲಾನುಭವಿಗಳನ್ನು ಪಡಿತರ ಚೀಟಿಯಿಂದ ರದ್ದುಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆ ನಷ್ಟವಾಗಿದೆ | ಬೆಳೆ ವಿಮೆ ಪರಿಹಾರ ಕಡಿಮೆಯಾಗಿದೆ.. ಮುಂದೇನು ಮಾಡಬಹುದು..?
December 9, 2025
8:04 AM
by: ಮಹೇಶ್ ಪುಚ್ಚಪ್ಪಾಡಿ
ಹಬ್ಬಗಳ ಸಮಯದಲ್ಲಿ ಪರಿಸರಕ್ಕೆ ಹಾನಿ ಮಾಡುವುದು, ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನಿಂದ ರಕ್ಷಿಸಲ್ಪಡದ ಧಾರ್ಮಿಕ ಆಚರಣೆಯಾಗಿದೆ: ನ್ಯಾಯಮೂರ್ತಿ ಓಕಾ
December 8, 2025
8:57 PM
by: ರೂರಲ್‌ ಮಿರರ್ ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆ ವಿಮೆ ಕತೆ ಏನು..? | ಬೆಳೆ ವಿಮೆ ಪಾವತಿಯಾಗದೇ ಇದ್ದರೆ ಸರ್ಕಾರದಿಂದ ಪರಿಹಾರ ಅಗತ್ಯವಿದೆ
December 7, 2025
8:20 PM
by: ಮಹೇಶ್ ಪುಚ್ಚಪ್ಪಾಡಿ
ಉತ್ತಮ ಆಹಾರದೊಂದಿಗೆ ಕಣ್ಣಿನ ರಕ್ಷಣೆ ಮಾಡಿ
December 7, 2025
3:31 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror