ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಮಾಡಲು ಕೊನೆಯ ಅವಕಾಶವಾಗಿರುತ್ತದೆ. ತದನಂತರ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಲಾಗುತ್ತದೆ. ಕೆಲವು ಸದಸ್ಯರು ಒಟಿಪಿ ಮೂಲಕ ತಿದ್ದುಪಡಿ ಮಾಡಿದ್ದು ಸದರಿ ಸದಸ್ಯರು ಜೀವಂತ ಇರುವ ಬಗ್ಗೆ ಜೀವಮಾಪನ ನೀಡಿ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿರುತ್ತದೆ.
ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ನೀಡಬೇಕಾಗಿದ್ದು, ಪಡಿತರ ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್.ಪಿ.ಜಿ.ವಿವರ, ಮೊಬೈಲ್ ಸಂಖ್ಯೆ ತುರ್ತಾಗಿ ಸಂಗ್ರಹಿಸಬೇಕಾಗಿರುತ್ತದೆ.
ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಾಲ್ತಿ ಇರುವ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ನೀಡಲು ಆಧಾರ್ ಕಾರ್ಡ್, ಎಲ್.ಪಿ.ಜಿ ದಾಖಲೆ, ಜಾತಿ ಪ್ರಮಾಣ ಪತ್ರ(ಇದ್ದಲ್ಲಿ), ಆದಾಯ ಪ್ರಮಾಣ ಪತ್ರ, ಎಂಡೋಸಲ್ಫಾನ್ ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ಧೃಢಪತ್ರಗಳಿದ್ದಲ್ಲಿ ಅವುಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಲು ತಿಳಿಸಿದೆ. ಆದ್ಯತೆ ಮೇರೆಗೆ ಇ-ಕೆವೈಸಿ ಮಾಡದಿರುವ ಅಂತ್ಯೋದಯ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಲೇ ಬೇಕಾಗಿದ್ದು ಇ-ಕೆವೈಸಿ ನೀಡಲು ಯಾವುದೇ ಶುಲ್ಕವಿರುವುದಿಲ್ಲ.
ಇ-ಕೆವೈಸಿ ಆಗದ ಪಡಿತರ ಪಡೆಯುತ್ತಿರುವ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಇ-ಕೆವೈಸಿ ಡ್ರೈವ್ ನಲ್ಲಿ ಇ-ಕೆವೈಸಿ ಮಾಡಿಕೊಳ್ಳಬೇಕು. ಫಲಾನುಭವಿಗಳು ತಮ್ಮ ಇ-ಕೆವೈಸಿ ಸ್ಥಿತಿಯನ್ನು ನೋಡಿಕೊಳ್ಳಲು ಮತ್ತು ಸ್ಪಷ್ಟೀಕರಣಗಳನ್ನು ಪಡೆಯಲು ಇಲಾಖೆಯ ನಿಶುಲ್ಕ ಸಹಾಯವಾಣಿ -1967/14445/1800 425 9339 ಗೆ ಕರೆ ಮಾಡಬಹುದು.
ಹಾಸಿಗೆ ಹಿಡಿದವರು, ಅಂಗವಿಕಲರು, ವೃದ್ಧರು, ಕುಷ್ಠರೋಗಿಗಳು ಇ-ಕೆವೈಸಿ ಮಾಡಲು ಸಾಧ್ಯವಾಗದಿದ್ದರೆ ಆಹಾರ ನಿರೀಕ್ಷಕರಿಗೆ ಮಾಹಿತಿ ಒದಗಿಸಬೇಕು. ಇ-ಕೆವೈಸಿ ಫಲಾನುಭವಿಯು ಕರ್ನಾಟಕದ ಹೊರಗಿದ್ದರೆ, ಅವರ ವಾಸ್ತವ್ಯದ ಹತ್ತಿರ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ಎಪ್ರಿಲ್ 30 ರ ಒಳಗೆ ಇ-ಕೆವೈಸಿ ಪೂರ್ಣಗೊಳಿಸಲು ಫಲಾನುಭವಿಗಳು ವಿಫಲರಾದ್ದಲ್ಲಿ, ಅಂತಹ ಫಲಾನುಭವಿಗಳನ್ನು ಪಡಿತರ ಚೀಟಿಯಿಂದ ರದ್ದುಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…