ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ 28ರೊಳಗೆ ಎಲ್ಲಾ ಪಡಿತರ ಕಾರ್ಡ್‌ಗಳನ್ನು ಸರಿಪಡಿಸಿ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಅರ್ಹ ಫಲಾನಿಭವಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗುತ್ತಿದ್ದು, ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರ ಅನರ್ಹ ಪಡಿತರ ಕಾರ್ಡುಗಳನ್ನು ಎ.ಪಿ.ಎಲ್ ಗೆ ವರ್ಗಾಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel