ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಧಾನ್ಯಗಳ ವಿತರಣೆಯಲ್ಲಿ ಆಗುವ ತೂಕದ ವ್ಯತ್ಯಾಸ, ಆಹಾರಧಾನ್ಯಗಳ ಗುಣಮಟ್ಟ ಪರಿಶೀಲನೆ ಮಾಡುವಂತೆ ದಾವಣಗೆರೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಟಿ. ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಡಿತರದಾರರಿಂದ ಸಾಕಷ್ಟು ದೂರುಗಳು ಬರುತ್ತಿದ್ದು, ಇದಕ್ಕೆ ಅವಕಾಶ ನೀಡದಂತೆ ಕ್ರಮ ವಹಿಸಲು ಸೂಚಿಸಿದರು. ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಬ್ಯಾಂಕ್ ಕೆವೈಸಿ, ಬಯೋಮೆಟ್ರಿಕ್ ಮೂಲಕ ಫಲಾನುಭವಿಗಳ ಖಾತೆಗೆ ವಿಳಂಬವಿಲ್ಲದೇ ಹಣ ಜಮೆಯಾಗುವಂತೆ ಕ್ರಮವಹಿಸಬೇಕೆಂದು ಅವರು ಸೂಚಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel