ಕರ್ನಾಟಕ ಸರಕಾರವು ರೇಷನ್ ಕಾರ್ಡ್ ಹೊಂದಿರುವ ಪ್ರತಿಯಂದು ಮನೆಗೂ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದೀಗ ರೇಷನ್ ಕಾರ್ಡ್ ಇದ್ದವರಿಗೆ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಬದಲಾಗಿ ಆಹಾರ ಧಾನ್ಯವಿರುವ ಇಂದಿರಾ ಕಿಟ್ ಅನ್ನು ವಿತರಣೆ ಮಾಡಲು ಅಧಿಕೃತ ಮಾರ್ಗ ಸೂಚಿಯನ್ನು ಪ್ರಕಟಿಸಲಾಗಿದ್ದು, ಜೊತೆಗೆ ಪ್ರತಿ ನ್ಯಾಯಬೆಲೆ ಅಂಗಡಿಯಲ್ಲೀಯೂ ಸಹ ಕ್ಯೂ ಆರ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಪುಡ್ ಕಿಟ್ ಕ್ರಮ ಕೈಗೊಳ್ಳಲು ಮುಂದಾಗಿದೆ.
ರಾಜ್ಯ ಸರಕಾರದಿಂದ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ಇಂದಿರಾ ಕಿಟ್ ಆಹಾರ ಧಾನ್ಯದ ಕಿಟ್ ಅನ್ನು ವಿತರಣೆ ಮಾಡಲು ಯೋಜನೆಯನ್ನು ರೂಪಿಸಲಾಗಿದ್ದು, ಇದಕ್ಕಾಗಿ ಅವಶ್ಯವಿರುವ ಅನುದಾನದ ವಿವರ ಈ ಕೆಳಗಿನಂತಿವೆ.
- ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್ ಅಗತ್ಯವಿದೆ.
- ಮಾತ್ರವಲ್ಲ ಇದಕ್ಕಾಗಿ ಪ್ರತಿ ತಿಂಗಳೂ ರೂ.446 ಕೋಟಿ ಅನುದಾನ ಅವಶ್ಯವಿದೆ.
- ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18628 ಮೆ.ಟನ್ ತೊಗರಿ ಬೇಳೆ.
- ತಲಾ 12419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯ ಎಂದು ಅಂದಾಜಿಸಲಾಗಿದೆ.
ಇನ್ನು ಜನರಿಗೆ ನೀಡುವ ಈ ಕಿಟ್ ನಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ತಪ್ಪು ನಡೆಯಬಾರದೆಂದು ಸರ್ಕಾರ ಎಚ್ಚರಿಕೆ ನೀಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

