ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ್ಯಾಯಬೆಲೆ ಅಂಗಡಿಗಳು ತಿಂಗಳ ಕೊನೆಯ ದಿನಾಂಕದವರೆಗೂ ಪ್ರತಿದಿನ ಪಡಿತರ ವಿತರಣೆ ಮಾಡಲು ಕಡ್ಡಾಯವಾಗಿ ತೆರೆದಿರುತ್ತವೆ. ತಿಂಗಳ ಕೊನೆಯವರೆಗೂ ಪಡಿತರ ವಿತರಣೆ ಮಾಡುವುದರಿಂದ ಪಡಿತರ ಚೀಟಿದಾರರು ಆತಂಕ ಪಡದೇ, ಪಡಿತರ ಪಡೆಯಬಹುದಾಗಿರುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ 7 ಗಂಟೆಯಿಂದ 10 ಗಂಟೆಯ ಸಮಯದಲ್ಲಿ ಪ್ರತಿದಿನ ಪಡಿತರ ಚೀಟಿದಾರರು ಪಡಿತರ ಪಡೆಯುತ್ತಿರುವ ಈ ಸಂದರ್ಭದಲ್ಲಿ ಸಾಮಾಜಿಕ ಅಂತರಕಾಯ್ದು ಮತ್ತು ಜನದಟ್ಟಣೆ ನಿಯಂತ್ರಣಕ್ಕಾಗಿ ಮೊದಲು ಬರುವ ಸರಾಸರಿ 100-150 ಪಡಿತರ ಚೀಟಿದಾರರಿಗೆ ಆದ್ಯತೆ ಮೇರೆಗೆ ಸಾಲಿನಲ್ಲಿ ನಿಲ್ಲಲು ಕ್ಯೂ ಸ್ಲಿಪ್ ಟೋಕನ್ ಗಳನ್ನು ನೀಡಲು ನ್ಯಾಯಬೆಲೆ ಅಂಗಡಿಗಳಿಗೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಸಾಕಷ್ಟು ಪ್ರಮಾಣದಲ್ಲಿ ಪಡಿತರ ಬಿಡುಗಡೆಯಾಗಿರುತ್ತದೆ. ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ Pಒಉಏಂಙ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ಪಡಿತರ ಚೀಟಿಯ ಪ್ರತಿ ಸದಸ್ಯರು ಪಡೆಯುತ್ತಾರೆ ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…