ಸೀ ಫೋಕ್ ಅವತಾರದಲ್ಲಿ ಬರಲಿದ್ದಾರೆ ರವಿ ಕಟಪಾಡಿ | ಬಡವರ ಪಾಲಿನ ದೇವತಾ ಮನುಷ್ಯ ಈ ಪಬ್ಲಿಕ್‌ ಹೀರೋ |

September 6, 2023
1:14 PM
ಪಬ್ಲಿಕ್ ಹೀರೋ ರವಿ ಕಟಪಾಡಿ ಈ ಬಾರಿ ಸೀ ಫೋಕ್ಎಂಬ ಹಾಲಿವುಡ್ ಮೂವಿಯ ಒಂದು ಫಿಕ್ಷನ್ ಪಾತ್ರವನ್ನು ಹೋಲುವ ವೇಷ ಹಾಕಲಿದ್ದಾರೆ. ಕುಂದಾಪುರ ಮೂಲದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎರಡು ವರ್ಷದ ಮಗುವಿಗೆ ರವಿ ಸಹಾಯ ಮಾಡುವ ಬಗ್ಗೆ ಹೇಳಿದ್ದಾರೆ.

ಜೀವನವೊಂದು ನಾಟಕ ರಂಗ, ಇಲ್ಲಿ ನಿಮಿಷಕ್ಕೊಮ್ಮೆ ವೇಷ ಬದಲಿಸಿ ಬದುಕಬೇಕಾಗುತ್ತದೆ. ಆದರೆ ಅದು ನಮ್ಮ ಜೀವನಕ್ಕೋಸ್ಕರ. ಆದ್ರೆ ಇಲ್ಲೊಬ್ರು ಬೇರಯವರ ಜೀವನಕ್ಕೆ ಬೆಳಕಾಗಲು ಬೇರೆ ಬೇರೆ ವೇಷ ತೊಟ್ಟು ತಮ್ಮ ಜೀವನವನ್ನು ನಿರ್ಗತಿಕರ ಜೀವನಕ್ಕಾಗಿ ಮುಡಿಪಾಗಿಟ್ಟಿದ್ದಾರೆ.

Advertisement
Advertisement
Advertisement

ಉಡುಪಿ ಜಿಲ್ಲೆ ಕಾಪು ತಾಲೂಕಿನ ರವಿ ಕಟಪಾಡಿ Ravi Katapadi ಅವರು ಪ್ರತಿ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆವಿಭಿನ್ನ ವೇಷಗಳನ್ನು ತೊಡುತ್ತಾರೆ. ಕಳೆದ ಏಳು ವರ್ಷಗಳಿಂದ ನಿರಂತರವಾಗಿ ವಿಭಿನ್ನ ವೇಷಭೂಷಣ ತೊಟ್ಟು ಅಷ್ಟಮಿ ಮತ್ತು ವಿಟ್ಲಪಿಂಡಿ ಮಹೋತ್ಸ ದಿನ ಒಂದು ಉದ್ದೇಶ ಇಟ್ಟುಕೊಂಡು ಜನರ ಮಧ್ಯೆ ಹೋಗುತ್ತಾರೆ. ರವಿ ಹಾಕುವ ವೇಷ ಸ್ವಂತಕ್ಕಲ್ಲ, ಪರರ ಹಿತಕ್ಕಾಗಿ ಹಾಗೂ ಕಷ್ಟದ ಪರಿಹಾರಕ್ಕಾಗಿ ಆಗಿರುತ್ತದೆ.

Advertisement

ರವಿ ಈವರೆಗೆ ಏಳು ವಿಭಿನ್ನ ವೇಷಗಳನ್ನು ತೊಟ್ಟಿದ್ದು ಒಂದು ಕೋಟಿ ಹದಿಮೂರು ಲಕ್ಷ 70 ಸಾವಿರ ರುಪಾಯಿ ಜನರಿಂದ ಸಂಗ್ರಹಿಸಿದ್ದಾರೆ. ಒಂದು ರೂಪಾಯಿ ಸ್ವಂತ ಖರ್ಚಿಗೆ ಇಟ್ಟುಕೊಳ್ಳದ ರವಿ, ಎಲ್ಲವನ್ನೂ 113 ಅನಾರೋಗ್ಯ ಪೀಡಿತ ಕುಟುಂಬಗಳಿಗೆ ದಾನ ಮಾಡಿದ್ದಾರೆ. ಈ ಬಾರಿ ಮತ್ತೊಂದು ವಿಭಿನ್ನ ವೇಷದ ಮುಂದೆ ಪ್ರತ್ಯಕ್ಷ ಆಗಲಿದ್ದಾರೆ.

ಸಮಾಜ ಸೇವೆ ಮಾಡಿ ನೊಂದವರ ಮುಖದಲ್ಲಿ ನಗು ಮೂಡಿಸಿದ ರವಿ ಮನಸ್ಸಿಗೆ ಈ ಬಾರಿ ನೋವಾಗಿದೆ. ವೇಷ ಹಾಕಿ ಸಂಗ್ರಹಿಸಿದ ಹಣದಿಂದ ಕೋಟಿ ರೂಪಾಯಿಯ ಮನೆ ಕಟ್ಟಿಸಿಕೊಳ್ಳುತ್ತಿದ್ದಾನೆ ಎಂದು ಕೆಲವರು ಕುಹಕವಾಡಿದ್ದಾರೆ. ಈ ಬಾರಿ ನಾನು ವೇಷ ಹಾಕುವುದಿಲ್ಲ ಎಂದು ರವಿ ನಿರ್ಧರಿಸಿದ್ದರು. ರವಿ ಫ್ರೆಂಡ್ಸ್ ಮೀಟಿಂಗ್ ಮಾಡಿ ಊರ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ನಮ್ಮ ಕೆಲಸ ನಾವು ಮಾಡೋಣ ಎಂದು ಈ ಬಾರಿಯೂ ವೇಷ ಹಾಕಲು ನಿರ್ಧರಿಸಿದ್ದಾರೆ.

Advertisement

ನಮ್ಮ ಪಬ್ಲಿಕ್ ಹೀರೋ ರವಿ ಕಟಪಾಡಿ ಈ ಬಾರಿ ಸೀ ಫೋಕ್ ಎಂಬ ಹಾಲಿವುಡ್ ಮೂವಿಯ ಒಂದು ಫಿಕ್ಷನ್ ಪಾತ್ರವನ್ನು ಹೋಲುವ ವೇಷ ಹಾಕಲಿದ್ದಾರೆ. ಕುಂದಾಪುರ ಮೂಲದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎರಡು ವರ್ಷದ ಮಗುವಿಗೆ ರವಿ ಸಹಾಯ ಮಾಡುವ ಮಾತು ನೀಡಿದ್ದಾರೆ. ಚಿಕಿತ್ಸೆಗೆ 15 ಲಕ್ಷ ರೂಪಾಯಿ ಬೇಕಾಗಿದ್ದು, ರವಿ ತನ್ನ ಕೈಲಾದ ಸಹಾಯ ಮಾಡಲಿದ್ದಾರೆ.

Source : Agencies

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ
ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ
ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ
November 23, 2024
6:12 AM
by: The Rural Mirror ಸುದ್ದಿಜಾಲ
ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ
November 23, 2024
6:06 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror