ಆರ್‌ಬಿಐ ನಿಂದಲೇ ಡಿಜಿಟಲ್ ಕರೆನ್ಸಿ ಆರಂಭ ಮಾಡಲಾಗುವುದು. 2022 ರಿಂದಲೇ ಆರ್‌ಬಿಐ ನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23 ನೇ ಸಾಲಿನ ಬಜೆಟ್ ನಲ್ಲಿ ತಿಳಿಸಿದ್ದಾರೆ.
ಎಸ್.ಸಿ /ಎಸ್ ಟಿ ರೈತರಿಗೆ ಆರ್ಥಿಕ ನೆರವು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಸಹಕಾರ, ಬಂಡವಾಳ ಹೂಡಿಕೆ ಮೂಲಕ ಆರ್ಥಿಕ ಪ್ರಗತಿಗೆ ಯೋಜನೆ ರೂಪಿಸಲಾಗುವುದು. ಮಾತ್ರವಲ್ಲ, ಇದೇ ವರ್ಷದಲ್ಲೇ ಆರ್‌ಬಿಐನಿಂದ ಡಿಜಿಟಲ್ ಕರೆನ್ಸಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
2022 ರಲ್ಲೇ ದೇಶದಲ್ಲಿ 5 ಜಿ ಸೇವೆ ಆರಂಭವಾಗಲಿದೆ. ಪ್ರತಿ ಹಳ್ಳಿಗಳಲ್ಲಿ ಆಪ್ಟಿಕಲ್ ಫೈಬಲ್ ಕೇಬಲ್ ಆರಂಭವಾಗಲಿದೆ. ಇ-ಪಾಸ್ ಪೋರ್ಟ್ 2023 ರಲ್ಲಿ ಜಾರಿಗೊಳಿಸಲಾಗುವುದು. ಹೊಸ ತಂತ್ರಜ್ಞಾನದೊಂದಿಗೆ ಇ-ಪಾಸ್ ಪೋರ್ಟ್ ಜಾರಿಗೊಳಿಸಿಲಾಗುವುದು ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel