2,000 ರೂಪಾಯಿಯ ನೋಟುಗಳನ್ನು ಬದಲಾಯಿಸಿಕೊಳ್ಳುವ ಗಡುವನ್ನು ಅಕ್ಟೋಬರ್ 7 ರವರೆಗೆ ಆರ್‌ಬಿಐ ವಿಸ್ತರಿಸಿದೆ.ಜನಸಾಮಾನ್ಯರು ತಮ್ಮ ನೋಟುಗಳನ್ನು 2023ರ ಸೆಪ್ಟೆಂಬರ್ 30ರವರೆಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ₹2000 ನೋಟುಗಳ ವಿನಿಮಯದ ಗಡುವನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಿದೆ.
ಮೇ 19 ರಂದು 2000 ರೂಪಾಯಿಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಆರ್‌ಬಿಐ ಘೋಷಿಸಿತ್ತು. ಜನಸಾಮಾನ್ಯರು ತಮ್ಮ ನೋಟುಗಳನ್ನು ಸೆಪ್ಟೆಂಬರ್ 30, 2023 ರೊಳಗೆ ಬದಲಾಯಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಗಡುವನ್ನು ವಿಸ್ತರಣೆ ಮಾಡಿದೆ.
ಆರ್‌ಬಿಐ ಅಂಕಿಅಂಶಗಳ ಪ್ರಕಾರ, ಮೇ 19 ರಂದು ಒಟ್ಟು ₹3.56 ಲಕ್ಷ ಕೋಟಿ ಮೌಲ್ಯದ ₹2000 ನೋಟುಗಳು ಚಲಾವಣೆಯಲ್ಲಿದ್ದವು. ಬ್ಯಾಂಕ್‌ಗಳು ಸೆಪ್ಟೆಂಬರ್ 29 ರ ಹೊತ್ತಿಗೆ ₹3.42 ಲಕ್ಷ ಕೋಟಿ ಮೌಲ್ಯದ ₹2000 ನೋಟುಗಳನ್ನು ಸ್ವೀಕರಿಸಿವೆ. ಅಂದರೆ ₹0.14 ಲಕ್ಷ ಕೋಟಿ ಮೌಲ್ಯದ ನೋಟುಗಳು ಇನ್ನೂ ಚಲಾವಣೆಯಲ್ಲಿವೆ.
ಮೇ 19ಕ್ಕೆ ಚಲಾವಣೆಯಲ್ಲಿದ್ದ ₹2000 ನೋಟುಗಳಲ್ಲಿ ಶೇ.96ರಷ್ಟು ನೋಟುಗಳು ವಾಪಸಾಗಿವೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು…
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ರಾಜ್ಯದ ವಿವಿಧ…
ಕಂದಾಯ ಅಧಿಕಾರಿಗಳು ಸಂವೇದನಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಬಹುದು ಎಂದು…
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಬರಾಜು ಮಾಡುವ ಅಗತ್ಯ ಔಷಧಿಗಳ ಪಟ್ಟಿಯನ್ನು 250 ರಿಂದ…
ದೀಪಾವಳಿಯ ವೇಳೆ ಪಟಾಕಿ ಸಿಡಿಸುವಾಗ ಇರಲಿ ಎಚ್ಚರ.