ಮರು ಜಾರಿಗೆ ಬಂದ `ಕೃಷಿ ಭಾಗ್ಯ’ ಯೋಜನೆ | 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಅನುಷ್ಠಾನ ಮಾಡಲು ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆ – ಎನ್. ಚಲುವರಾಯಸ್ವಾಮಿ

February 22, 2024
11:29 AM

ಸರ್ಕಾರಗಳು(Govt) ರೈತರ(Farmer) ಹಿತ ಕಾಪಾಡಿದರಷ್ಟೆ ಒಳ್ಳೆಯ ಬೆಳೆ(Crop) ತೆಗೆಯಲು ಸಾಧ್ಯ. ರೈತ ತಲೆ ಎತ್ತಿ ಬದುಕಲು ಸಾಧ್ಯ. ಇದೀಗ ಕರ್ನಾಟಕದ(Karnataka) ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಗೆ (Agriculture) ಮಳೆ ನೀರನ್ನು(Rain Water) ಒದಗಿಸಿ ಕೃಷಿ ಉತ್ಪಾದನೆ ಹೆಚ್ಚಿಸಲು 2023-24ನೇ ಸಾಲಿನ ಆಯವ್ಯಯದಲ್ಲಿ(Budget) ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ (2014ರ ಅವಿಭಜಿತ ತಾಲೂಕುಗಳು) ಕೃಷಿ ಭಾಗ್ಯ ಯೋಜನೆ (Krishi Bhagya Yojana) ಮರು ಜಾರಿಗೊಳಿಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (N Chaluvarayaswamy) ತಿಳಿಸಿದರು.

Advertisement

ಕರ್ನಾಟಕ ವಿಧಾನಸಭೆಯಲ್ಲಿ ಶಿರಹಟ್ಟಿ ಶಾಸಕರಾದ ಡಾ. ಚಂದ್ರು ಲಮಾಣಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಮಳೆಯಾಶ್ರಿತ ಕೃಷಿ ನೀತಿ, 2014ರ ಅನ್ವಯ 100 ಕೋಟಿ ರೂ.ಗಳ ಅನುದಾನದಲ್ಲಿ ಸದರಿ ಯೋಜನೆಯನ್ನು 2023-24ನೇ ಸಾಲಿನಲ್ಲಿ ಪ್ಯಾಕೇಜ್ ಮಾದರಿಯಲ್ಲಿ (ಕ್ಷೇತ್ರ ಬದು, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ತಂತಿಬೇಲಿ, ಪಂಪ್ ಸೆಟ್, ಸೂಕ್ಷ್ಮ ನೀರಾವರಿ ಘಟಕಗಳು) ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆಯನ್ವಯ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮುಂಗಾರು 2023ನೇ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳು ಸೇರ್ಪಡೆಯಾಗಿದ್ದರೂ ಸಹ 2023-24ನೇ ಸಾಲಿನಲ್ಲಿ ರಾಜ್ಯ ಮಳೆಯಾಶ್ರಿತ ಕೃಷಿ ನೀತಿ, 2014ರ ಅನ್ವಯ ಕೃಷಿ ಭಾಗ್ಯ ಯೋಜನೆ ರಾಜ್ಯದ ಒಣ ಕೃಷಿ ಹವಾಮಾನ ವಲಯಗಳಲ್ಲಿ ಇರುವ ತಾಲೂಕುಗಳಲ್ಲಿ ಮಾತ್ರ ಅನುಷ್ಠಾನ ಮಾಡಲಾಗುತ್ತಿದೆ. ಹಾಗಾಗಿ ಗದಗ ಜಿಲ್ಲೆಯ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳು ಒಣ ಕೃಷಿ ಹವಾಮಾನ ವಲಯದಲ್ಲಿ ಇಲ್ಲದಿರುವ ಕಾರಣ ಸೇರ್ಪಡೆ ಮಾಡಲಾಗಿಲ್ಲ ಎಂದು ತಿಳಿಸಿದರು.

2023-24ನೇ ಸಾಲಿನ ಆಯವ್ಯಯದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ರಾಜ್ಯದ ಮಳೆಯಾಶ್ರಿತ ಕೃಷಿ ನೀತಿ, 2014ರ ಅನ್ವಯ ರಾಜ್ಯದ 24 ಜಿಲ್ಲೆ 106 ತಾಲೂಕುಗಳಲ್ಲಿ (2014ರ ಅವಿಭಜಿತ ತಾಲೂಕುಗಳು) ಅನುಷ್ಠಾನ ಮಾಡಲು ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆಯನ್ನು ಈಗಾಗಲೇ ಜಿಲ್ಲೆಗಳಿಗೆ ನೀಡಲಾಗಿದೆ. ಅದರಂತೆ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ಹೇಳಿದರು. ಪ್ರಸಕ್ತ ಸಾಲಿನ ಆರ್ಥಿಕ ವರ್ಷಾಂತ್ಯಕ್ಕೆ ಕೇವಲ ಒಂದು ತಿಂಗಳು ಬಾಕಿ ಇದ್ದು, ಈ ಹಂತದಲ್ಲಿ ಯಾವುದೇ ಸೇರ್ಪಡೆ/ಬದಲಾವಣೆ ಹಾಗೂ ಅದರಂತೆಯೇ ಅನುಷ್ಠಾನ ಕಷ್ಟಸಾಧ್ಯವಾಗಿರುತ್ತದೆ ಎಂದು ತಿಳಿಸಿದರು.

  • ಅಂತರ್ಜಾಲ ಮಾಹಿತಿ

In the 2023-24 budget, Krishi Bhagya Yojana has been re-implemented in 106 taluks (undivided taluks of 2014) of 24 districts of the state to increase agricultural production by providing rain water for sustainable agriculture in the rain-fed areas of Karnataka. Agriculture Minister N. N Chaluvarayaswamy said.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!
May 11, 2025
7:21 AM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು
May 11, 2025
7:15 AM
by: ನಾ.ಕಾರಂತ ಪೆರಾಜೆ
ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ
May 10, 2025
7:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group