ಹಿಮಾಚಲ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನದಿಗಳ ನೀರಿನ ಮಟ್ಟ ಏರಿಕೆಯಾಗಿ ಮುಂಗಾರು ತೀವ್ರಗೊಳ್ಳುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ಎಚ್ಚರಿಕೆಯಿಂದಿರಲು ಸರ್ಕಾರ ಸೂಚಿಸಿದೆ. ಇದೇ ವೇಳೆ ಜಾರ್ಖಂಡ್‌ನ ವಿವಿದೆಡೆ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಜುಲೈ 5 ರವರೆಗೆ ಒಡಿಶಾ, ಬಿಹಾರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.
ಮುಂಗಾರು ಈಗಾಗಲೇ ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ ಜಿಲ್ಲೆಗಳಲ್ಲಿ ಕಳೆದ 12 ಗಂಟೆಗಳಿಂದ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಕಾಂಗ್ರಾ, ಮಂಡಿ, ಸೋಲನ್ ಮತ್ತು ಸಿರ್ಮೌರ್ ಎಂಬ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಠಾಕೂರ್ ಸುಖವಿಂದರ್ ಸಿಂಗ್ ಸುಖು ಅವರ ಸೂಚನೆಯ ಮೇರೆಗೆ, ಭಾರೀ ಮಳೆಯ ಎಚ್ಚರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಹಲವು ಶಾಲೆಗಳನ್ನು ಮುಚ್ಚಲಾಗಿದೆ. ಅನೇಕ ಜಿಲ್ಲೆಗಳಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಗಮನಾರ್ಹವಾಗಿ ಹೆಚ್ಚಾಗಿದೆ. ಪ್ರತಿಕೂಲ ಹವಾಮಾನದ ಸಮಯದಲ್ಲಿ ನಿವಾಸಿಗಳು ಜಾಗರೂಕರಾಗಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಆಡಳಿತವು ಸಲಹೆ ನೀಡಿದೆ.
ಇದೇ ವೇಳೆ ಜಾರ್ಖಂಡ್‌ನ ವಿವಿದೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಒಡಿಶಾ, ಬಿಹಾರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಜುಲೈ 5 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಐಎಂಡಿ ಪ್ರಕಾರ, ಇಂದು ಚಂಡೀಗಢ, ದೆಹಲಿ, ಹಿಮಾಚಲ ಪ್ರದೇಶ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ವಿದರ್ಭದಲ್ಲಿ ಮಳೆಯ ಪರಿಸ್ಥಿತಿ ಮುಂದುವರಿಯಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಪ್ರತ್ಯೇಕ ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.