MIRROR FOCUS

ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಿಮಾಚಲ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನದಿಗಳ ನೀರಿನ ಮಟ್ಟ ಏರಿಕೆಯಾಗಿ ಮುಂಗಾರು ತೀವ್ರಗೊಳ್ಳುತ್ತಿರುವುದರಿಂದ  ಸ್ಥಳೀಯ ನಿವಾಸಿಗಳು ಎಚ್ಚರಿಕೆಯಿಂದಿರಲು ಸರ್ಕಾರ ಸೂಚಿಸಿದೆ. ಇದೇ ವೇಳೆ ಜಾರ್ಖಂಡ್‌ನ ವಿವಿದೆಡೆ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಜುಲೈ 5 ರವರೆಗೆ ಒಡಿಶಾ, ಬಿಹಾರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ  ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.

Advertisement

ಮುಂಗಾರು ಈಗಾಗಲೇ ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ ಜಿಲ್ಲೆಗಳಲ್ಲಿ ಕಳೆದ 12 ಗಂಟೆಗಳಿಂದ ಭಾರೀ  ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಕಾಂಗ್ರಾ, ಮಂಡಿ, ಸೋಲನ್ ಮತ್ತು ಸಿರ್ಮೌರ್ ಎಂಬ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಠಾಕೂರ್ ಸುಖವಿಂದರ್ ಸಿಂಗ್ ಸುಖು ಅವರ ಸೂಚನೆಯ ಮೇರೆಗೆ, ಭಾರೀ ಮಳೆಯ ಎಚ್ಚರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಹಲವು ಶಾಲೆಗಳನ್ನು ಮುಚ್ಚಲಾಗಿದೆ. ಅನೇಕ ಜಿಲ್ಲೆಗಳಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಗಮನಾರ್ಹವಾಗಿ ಹೆಚ್ಚಾಗಿದೆ. ಪ್ರತಿಕೂಲ ಹವಾಮಾನದ ಸಮಯದಲ್ಲಿ ನಿವಾಸಿಗಳು ಜಾಗರೂಕರಾಗಿರಲು ಮತ್ತು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಆಡಳಿತವು ಸಲಹೆ ನೀಡಿದೆ.

ಇದೇ ವೇಳೆ  ಜಾರ್ಖಂಡ್‌ನ ವಿವಿದೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.  ಒಡಿಶಾ, ಬಿಹಾರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಜುಲೈ 5 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಐಎಂಡಿ ಪ್ರಕಾರ, ಇಂದು ಚಂಡೀಗಢ, ದೆಹಲಿ, ಹಿಮಾಚಲ ಪ್ರದೇಶ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ವಿದರ್ಭದಲ್ಲಿ ಮಳೆಯ ಪರಿಸ್ಥಿತಿ ಮುಂದುವರಿಯಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಪ್ರತ್ಯೇಕ ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು

ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…

6 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ

ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ  |…

6 hours ago

ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…

6 hours ago

ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ

ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…

7 hours ago

ಗ್ರಾಮೀಣಾಭಿವೃದ್ಧಿಯೇ ನಮ್ಮ ಗುರಿ ಎಂದ ಶಾಲಿನಿ ರಜನೀಶ್

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ…

7 hours ago

ಕಳಪೆ ಗೊಬ್ಬರ ಮಾರಿದ್ದ ಆರೋಪ | ರಾಣೆಬೆನ್ನೂರಿನಲ್ಲಿ ಕೇಸು ದಾಖಲು

ರೈತರಿಗೆ ‘ಎನ್‌ಪಿಕೆ 17 :17 :17 ' ಹೆಸರಿನಲ್ಲಿ ಕಳಪೆ ಗೊಬ್ಬರ ಮಾರಿದ್ದ…

8 hours ago