ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

March 12, 2025
7:10 AM

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು ಕರ್ನಾಟಕಕ್ಕೂ ಕೂಡಲೇ ವಿಸ್ತರಿಸಬೇಕೆಂದು ಒತ್ತಾಯಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆದಿದ್ದಾರೆ.  ಕರ್ನಾಟಕದಲ್ಲಿ, ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ, ಮೆಣಸಿನಕಾಯಿ ಬೆಲೆ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಕುಸಿದಿರುವುದರಿಂದ ನಮ್ಮ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರ ಈಗಲೇ ಕ್ರಮ ಕೈಗೊಳ್ಳಬೇಕುಎಂದು ಸಿಎಂ ಪತ್ರದಲ್ಲಿ ಬರೆದಿದ್ದಾರೆ.………ಮುಂದೆ ಓದಿ……..

Advertisement

ಈ ನಡುವೆ  ಕೆಂಪು ಮೆಣಸಿನಕಾಯಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗಾಗಿ ಕರ್ನಾಟಕಕ್ಕೂ ಬೆಂಬಲ ಬೆಲೆ ಯೋಜನೆ ವಿಸ್ತರಿಸುವಂತೆ ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರಲ್ಲದೆ, ರಾಜ್ಯದ ಕೆಂಪು ಮೆಣಸಿನಕಾಯಿ ಹಿತ ರಕ್ಷಣೆ ಬಗ್ಗೆ  ಮಹತ್ವದ ಸಮಾಲೋಚನೆ ಸಹ ನಡೆಸಿದರು.ರಾಜ್ಯದಲ್ಲಿ ಕೆಂಪು ಮೆಣಸಿನಕಾಯಿ ಬೆಳೆಗಾರರು ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಕುಸಿತದಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಖರೀದಿದಾರರು ಕೇಳುವಂತಹ ಕನಿಷ್ಠ ಬೆಲೆಗೆ ಮಾರಿ ರೈತರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಹಾಗಾಗಿ  ಇದಕ್ಕೆ ಪರಿಹಾರ ಮಾರ್ಗ ಕಲ್ಪಿಸಿ ಎಂದು ಕೃಷಿ ಸಚಿವರ ಗಮನ ಸೆಳೆದರು ಪ್ರಲ್ಹಾದ ಜೋಶಿ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ
August 11, 2025
8:43 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್
August 11, 2025
7:27 AM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ
August 10, 2025
7:00 AM
by: ನಾ.ಕಾರಂತ ಪೆರಾಜೆ
ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ
August 9, 2025
7:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group