ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು ಕರ್ನಾಟಕಕ್ಕೂ ಕೂಡಲೇ ವಿಸ್ತರಿಸಬೇಕೆಂದು ಒತ್ತಾಯಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ, ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ, ಮೆಣಸಿನಕಾಯಿ ಬೆಲೆ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಕುಸಿದಿರುವುದರಿಂದ ನಮ್ಮ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರ ಈಗಲೇ ಕ್ರಮ ಕೈಗೊಳ್ಳಬೇಕುಎಂದು ಸಿಎಂ ಪತ್ರದಲ್ಲಿ ಬರೆದಿದ್ದಾರೆ.………ಮುಂದೆ ಓದಿ……..
ಈ ನಡುವೆ ಕೆಂಪು ಮೆಣಸಿನಕಾಯಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗಾಗಿ ಕರ್ನಾಟಕಕ್ಕೂ ಬೆಂಬಲ ಬೆಲೆ ಯೋಜನೆ ವಿಸ್ತರಿಸುವಂತೆ ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರಲ್ಲದೆ, ರಾಜ್ಯದ ಕೆಂಪು ಮೆಣಸಿನಕಾಯಿ ಹಿತ ರಕ್ಷಣೆ ಬಗ್ಗೆ ಮಹತ್ವದ ಸಮಾಲೋಚನೆ ಸಹ ನಡೆಸಿದರು.ರಾಜ್ಯದಲ್ಲಿ ಕೆಂಪು ಮೆಣಸಿನಕಾಯಿ ಬೆಳೆಗಾರರು ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಕುಸಿತದಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಖರೀದಿದಾರರು ಕೇಳುವಂತಹ ಕನಿಷ್ಠ ಬೆಲೆಗೆ ಮಾರಿ ರೈತರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಹಾಗಾಗಿ ಇದಕ್ಕೆ ಪರಿಹಾರ ಮಾರ್ಗ ಕಲ್ಪಿಸಿ ಎಂದು ಕೃಷಿ ಸಚಿವರ ಗಮನ ಸೆಳೆದರು ಪ್ರಲ್ಹಾದ ಜೋಶಿ.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…