ಕೆಂಪುಕಲ್ಲು ಗಣಿಗಾರಿಕೆ | ಹೈಕೋರ್ಟ್‌ ನಿರ್ದೇಶನದಂತೆ ಅಧಿಕಾರಿಗಳಿಂದ ಆ.6 ರಂದು ಪರಿಶೀಲನೆ |

August 5, 2021
10:51 PM

ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಕಳೆದ ಹಲವು ಸಮಯಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈಚೆಗೆ ಮರಳುಗಾರಿಕೆ,  ಕೆಂಪು ಕಲ್ಲು ಗಣಿಗಾರಿಕೆಯೂ ಸತತವಾಗಿ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮೌನ ವಹಿಸಿರುವುದು  ಬೆಳಕಿಗೆ ಬಂದಿದೆ. ಇದೀಗ ಈ ಘಟನೆಗಳು ಹೈಕೋರ್ಟ್‌ ಗಮನಕ್ಕೆ ಬಂದಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಪ್ರದೇಶದಲ್ಲಿ  ನಡೆಯುತ್ತಿದ್ದ ಕೆಂಪು ಕಲ್ಲು ಗಣಿಗಾರಿಕೆ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್‌ ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿತ್ತು. ಇದರಂತೆ ಆ.6  ರಂದು ಗುತ್ತಿಗಾರು ಗ್ರಾಮದಲ್ಲಿ  ಅಧಿಕಾರಿಗಳಿಂದ ಪರಿಶೀಲನೆ ನಡೆಯಲಿದೆ.

Advertisement
Advertisement

ಗಣಿಗಾರಿಕೆ ನಡೆಯುವುದರಿಂದ ಪಶ್ಚಿಮ ಘಟ್ಟದ ಪ್ರದೇಶದ ಮೇಲೆ ಇದರಿಂದ ಪರಿಸರದ ಮೇಲೆ ತೀವ್ರ ಹಾನಿಯಾಗುತ್ತಿದೆ ಎಂದು ಹಲವಾರು ಸಮಯಗಳಿಂದ ಆಕ್ಷೇಪ ಇತ್ತು. ಪರಿಸರ ಪ್ರೇಮಿಗಳು ಈ ಬಗ್ಗೆ ಹಲವು ಸಮಯಗಳಿಂದ ಒತ್ತಾಯ ಮಾಡುತ್ತಿದ್ದರು. ಬಳ್ಳಾರಿ ಪ್ರದೇಶದಲ್ಲಿ ಕಂಡುಬಂದಂತೆ ಗಣಿಗಾರಿಕೆಯಿಂದ ವ್ಯಾಪಕ ಪರಿಸರ ನಾಶವಾಗಿದೆ ಎಂಬುದು  ಪರಿಸರವಾದಿಗಳ ಆರೋಪವಾಗಿತ್ತು. ಆದರೆ ಯಾವುದೂ ಪ್ರಯೋಜನ ಆಗಿರಲಿಲ್ಲ. ಈಚೆಗೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಪ್ರಕರಣವೊಂದರ ಆಧಾರದಲ್ಲಿ ಸುಳ್ಯದ ಜಾಲ್ಸೂರು ಬಳಿಯ ಬೋಜಪ್ಪ ನಾಯ್ಕ್‌ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಗೆ ಸಲ್ಲಿಸಿದ್ದರು ಈ ಅರ್ಜಿಯನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ ಎಸ್‌ ಓಕ್‌ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಕೆಂಪು ಕಲ್ಲು ಗಣಿಗಾರಿಕೆ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿದ್ದವು. ಅನೇಕ ಸಮಯಗಳಿಂದ ಗಣಿಗಾರಿಕೆ ನಡೆಯುತ್ತಿದ್ದರೂ ಇಲಾಖೆಗಳು ಏಕೆ ಗಂಭೀರವಾಗಿ ಪರಿಗಣಿಸಲಿಲ್ಲ ಎಂಬುದು ಅರ್ಜಿದಾರರ ಪ್ರಶ್ನೆಯಾಗಿತ್ತು. ಇದೀಗ ಈ ಪ್ರಕರಣವನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ
July 26, 2025
3:56 PM
by: The Rural Mirror ಸುದ್ದಿಜಾಲ
ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ
July 26, 2025
3:16 PM
by: The Rural Mirror ಸುದ್ದಿಜಾಲ
ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ
July 26, 2025
2:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?
July 26, 2025
11:18 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group