ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಕಳೆದ ಹಲವು ಸಮಯಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈಚೆಗೆ ಮರಳುಗಾರಿಕೆ, ಕೆಂಪು ಕಲ್ಲು ಗಣಿಗಾರಿಕೆಯೂ ಸತತವಾಗಿ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮೌನ ವಹಿಸಿರುವುದು ಬೆಳಕಿಗೆ ಬಂದಿದೆ. ಇದೀಗ ಈ ಘಟನೆಗಳು ಹೈಕೋರ್ಟ್ ಗಮನಕ್ಕೆ ಬಂದಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಪ್ರದೇಶದಲ್ಲಿ ನಡೆಯುತ್ತಿದ್ದ ಕೆಂಪು ಕಲ್ಲು ಗಣಿಗಾರಿಕೆ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿತ್ತು. ಇದರಂತೆ ಆ.6 ರಂದು ಗುತ್ತಿಗಾರು ಗ್ರಾಮದಲ್ಲಿ ಅಧಿಕಾರಿಗಳಿಂದ ಪರಿಶೀಲನೆ ನಡೆಯಲಿದೆ.
ಗಣಿಗಾರಿಕೆ ನಡೆಯುವುದರಿಂದ ಪಶ್ಚಿಮ ಘಟ್ಟದ ಪ್ರದೇಶದ ಮೇಲೆ ಇದರಿಂದ ಪರಿಸರದ ಮೇಲೆ ತೀವ್ರ ಹಾನಿಯಾಗುತ್ತಿದೆ ಎಂದು ಹಲವಾರು ಸಮಯಗಳಿಂದ ಆಕ್ಷೇಪ ಇತ್ತು. ಪರಿಸರ ಪ್ರೇಮಿಗಳು ಈ ಬಗ್ಗೆ ಹಲವು ಸಮಯಗಳಿಂದ ಒತ್ತಾಯ ಮಾಡುತ್ತಿದ್ದರು. ಬಳ್ಳಾರಿ ಪ್ರದೇಶದಲ್ಲಿ ಕಂಡುಬಂದಂತೆ ಗಣಿಗಾರಿಕೆಯಿಂದ ವ್ಯಾಪಕ ಪರಿಸರ ನಾಶವಾಗಿದೆ ಎಂಬುದು ಪರಿಸರವಾದಿಗಳ ಆರೋಪವಾಗಿತ್ತು. ಆದರೆ ಯಾವುದೂ ಪ್ರಯೋಜನ ಆಗಿರಲಿಲ್ಲ. ಈಚೆಗೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಪ್ರಕರಣವೊಂದರ ಆಧಾರದಲ್ಲಿ ಸುಳ್ಯದ ಜಾಲ್ಸೂರು ಬಳಿಯ ಬೋಜಪ್ಪ ನಾಯ್ಕ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು ಈ ಅರ್ಜಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಕೆಂಪು ಕಲ್ಲು ಗಣಿಗಾರಿಕೆ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿದ್ದವು. ಅನೇಕ ಸಮಯಗಳಿಂದ ಗಣಿಗಾರಿಕೆ ನಡೆಯುತ್ತಿದ್ದರೂ ಇಲಾಖೆಗಳು ಏಕೆ ಗಂಭೀರವಾಗಿ ಪರಿಗಣಿಸಲಿಲ್ಲ ಎಂಬುದು ಅರ್ಜಿದಾರರ ಪ್ರಶ್ನೆಯಾಗಿತ್ತು. ಇದೀಗ ಈ ಪ್ರಕರಣವನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಿದೆ.
07.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
2047ರ ವೇಳೆಗೆ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯಿಂದ 32 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ…
ತುಂಗ-ಭದ್ರಾ ಎರಡೂ ಜಲಾಶಯಗಳಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ೮೦ ಸಾವಿರಕ್ಕೂ ಅಧಿಕ ಕ್ಯೂಸೆಕ್…
ಇತ್ತೀಚಿನ ವಿಜ್ಞಾನ ಮತ್ತು ಹೊಸ ವಿಧಾನಗಳನ್ನು ಬಳಸಿಕೊಂಡು ಜಾಗತಿಕವಾಗಿ ವೇಗವಾಗಿ ಬೆಳೆಯುವ ಮರಗವನ್ನು…
ತನ್ನಲ್ಲಿರುವುದನ್ನು ಸಮ್ಮನಸ್ಸಿನಿಂದ ನೀಡುವುದು ದಾನ. ಪಡಕೊಂಡವನ ತೃಪ್ತಿಯು ದಾನಿಗೆ ಹಾರೈಕೆ. ಇಲ್ಲಿ ಪ್ರಚಾರದ…
ಚಂದನ್ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…