ಹವಾಮಾನ ವರದಿ | 08-08-2024 | ಅಲ್ಲಲ್ಲಿ ಸಾಮಾನ್ಯ ಮಳೆ | ಮುಂಗಾರು ದುರ್ಬಲತೆ ಆರಂಭ |

August 8, 2024
1:24 PM
ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದು ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕ್ಷೀಣಿಸಿದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.

09.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಿನ ಪಾವಗಡ, ಚಿತ್ರದುರ್ಗ ಉತ್ತರ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ, ಗುಡುಗು ಸಹಿತ ಸಾಧ್ಯತೆ ಇದೆ.

ಉಳಿದ ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದು ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕ್ಷೀಣಿಸಿದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು
ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!
March 23, 2026
7:25 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror